alex Certify
ಕನ್ನಡ ದುನಿಯಾ       Mobile App
       

Kannada Duniya

ತಂಗಿ ಮೇಲೆಯೇ ಅಣ್ಣನ ರೇಪ್, ಕಂಡ ತಮ್ಮನೂ..!

rape 2a

ಒಡಹುಟ್ಟಿದ ಸಹೋದರಿ ಎಂಬುದನ್ನೇ ಮರೆತು, ಅಪ್ರಾಪ್ತ ವಯಸ್ಸಿನ ತಂಗಿ ಮೇಲೆಯೇ, ಅಣ್ಣ, ತಮ್ಮ ಅತ್ಯಾಚಾರ ಎಸಗಿದ ಘಟನೆ ಮುಂಬೈನಲ್ಲಿ ನಡೆದಿದೆ. ಕಾಮುಕ ಅಣ್ಣಂದಿರ ಕೃತ್ಯದಿಂದ ನಲುಗಿರುವ ಯುವತಿ ಮಾನಸಿಕವಾಗಿ ಕುಗ್ಗಿ ಹೋಗಿದ್ದಾಳೆ.

ಮುಂಬೈನ ಮಾಲ್ವಾಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಸಹೋದರರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. 25 ವರ್ಷ ವಯಸ್ಸಿನ ಹಿರಿಯ ಸಹೋದರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ತಂಗಿಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ. ಹೀಗೆ ಸುಮಾರು 5 ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಹಿರಿಯ ಸಹೋದರ ತಂಗಿಯ ಮೇಲೆಯೇ ಅತ್ಯಾಚಾರ ಎಸಗಿದ್ದನ್ನು ಕಂಡ, 22 ವರ್ಷದ ಕಿರಿಯ ಸಹೋದರನೂ, ಬಹಿರಂಗಪಡಿಸುವುದಾಗಿ ಹೇಳಿ ತಂಗಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ತಂದೆ, ತಾಯಿ ಕೂಲಿ ಕಾರ್ಮಿಕರಾಗಿದ್ದು, ಹಗಲೆಲ್ಲಾ ಮನೆಯಿಂದ ಹೊರಗೆ ದುಡಿಯಲು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಕಾಮುಕರು, ತಂಗಿಯ ಮೇಲೆಯೇ ಅತ್ಯಾಚಾರ ಎಸಗಿದ್ದು, ತಾಯಿಗೆ ಗೊತ್ತಾಗಿ ಪೊಲೀಸರಿಗೆ ದೂರು ನೀಡಿದ್ದರು. ಅಪ್ರಾಪ್ತೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...