alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂಬೈ ವಿಮಾನ ನಿಲ್ದಾಣದಲ್ಲಿ 1.16 ಕೋಟಿ ರೂ. ಚಿನ್ನ ಜಪ್ತಿ

nn3_c1fopzd

ಮುಂಬೈ ವಿಮಾನ ನಿಲ್ದಾಣದಲ್ಲಿ ಅಪಾರ ಪ್ರಮಾಣದ ಬಂಗಾರವನ್ನು ಜಪ್ತಿ ಮಾಡಲಾಗಿದೆ. ಸೂಕ್ತ ಮಾಹಿತಿ ಮೇರೆಗೆ ದಾಳಿ ನಡೆಸಿದ  ಕಂದಾಯ ಗುಪ್ತಚರ ನಿರ್ದೇಶನಾಲಯ 6 ಕೆಜಿ ಚಿನ್ನವನ್ನು ಮಹಿಳೆಯೊಬ್ಬಳಿಂದ ವಶಕ್ಕೆ ಪಡೆದಿದ್ದಾರೆ.

ಮುಂಬೈ ಮೂಲದ ಜುಝಾರ್ ಹಜುರಿ ಎಂಬ ಮಹಿಳೆಯಿಂದ 1,16,18,854 ರೂ. ಮೌಲ್ಯದ ಚಿನ್ನವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮಹಿಳೆ ಎಮಿರೇಟ್ಸ್ ಏರ್ವೇಸ್ ಮೂಲಕ ದುಬೈನಿಂದ ಮುಂಬೈಗೆ ಬಂದಿದ್ದಳು ಎನ್ನಲಾಗಿದೆ. ಬಂಗಾರದ ಬಗ್ಗೆ ಮಹಿಳೆ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿನ್ನವನ್ನು ಕಳ್ಳಸಾಗಣೆ ಮಾಡ್ತಿರುವುದಾಗಿ ಮಹಿಳೆ ಒಪ್ಪಿಕೊಂಡಿದ್ದಾಳೆ. ಮಹಿಳೆಯನ್ನು ಬಂಧಿಸಿರುವ ಅಧಿಕಾರಿಗಳು ವಿಚಾರಣೆ ಮುಂದುವರೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ವಿಐಪಿ ಕಾರ್ ಮೇಲಿನ ಕೆಂಪು ದೀಪ ತೆರವುಗೊಳಿಸಿದರೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಸಿಗಲಿದೆಯೇ..?

    View Results

    Loading ... Loading ...