alex Certify
ಕನ್ನಡ ದುನಿಯಾ       Mobile App
       

Kannada Duniya

ಎಲ್ಲರೆದುರೇ ರೈಲ್ವೆ ಹಳಿ ಮೇಲೆ ಮಲಗಿದ..!?

ಮಹಾನಗರಿ ಮುಂಬೈನಲ್ಲಿ ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ವ್ಯಕ್ತಿಯೊಬ್ಬನ ಪ್ರಾಣ ಉಳಿದಿದೆ. ರೈಲ್ವೆ ಹಳಿಗಳ ಮೇಲೆ ಮಲಗಿ ಆತ್ಮಹತ್ಯೆಗೆ ಮುಂದಾಗಿದ್ದವನನ್ನು ರೈಲ್ವೆ ಅಧಿಕಾರಿಗಳು ಹಾಗೂ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದವನನ್ನು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ಜುಲೈ 3 ರಂದು ನಡೆದಿದೆ. ಮುಂಬೈನ ಕುರ್ಲಾ ರೈಲ್ವೆ ನಿಲ್ದಾಣದಲ್ಲಿ ಸೆಂಟ್ರಲ್ ಲೈನ್ ಮೇಲೆ ವ್ಯಕ್ತಿಯೊಬ್ಬ ಮಲಗಿದ್ದ. ಇದನ್ನು ನೋಡಿದ ಸ್ಥಳೀಯರು ಹಾಗೂ ಅಧಿಕಾರಿಗಳು ಆತನನ್ನು ಎಬ್ಬಿಸಿ ತಕ್ಷಣ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಯಾರು ಹಾಗೂ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಮುಂದಾಗಿದ್ದ ಎಂಬುದು ಬಹಿರಂಗವಾಗಿಲ್ಲ. ವಿಡಿಯೋ ಮಾತ್ರ ವೈರಲ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...