alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಿಯಕರನ ಜೊತೆಗಿದ್ದಾಗಲೇ ನಡೀತು ದುರಂತ

Murder sep 5

ಬಾಗಲಕೋಟೆ: ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ ಹಾಗೂ ಪುರುಷನನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನಲ್ಲಿ ನಡೆದಿದೆ.

30 ವರ್ಷದ ವ್ಯಕ್ತಿ ಹಾಗೂ 28 ವರ್ಷದ ವಿವಾಹಿತ ಮಹಿಳೆ ನಡುವೆ ಅನೈತಿಕ ಸಂಬಂಧವಿದ್ದು, ಇವರಿಬ್ಬರು ಮನೆಯಲ್ಲಿ ಜೊತೆಗಿದ್ದಾಗಲೇ ಮಹಿಳೆಯ ಮಾವ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಅಮೀನಘಡ ಪೊಲೀಸ್ ಠಾಣೆ ವ್ಯಾಪ್ತಿಯ ಬೇನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅನ್ಯ ಧರ್ಮಕ್ಕೆ ಸೇರಿದ ವ್ಯಕ್ತಿ ಹಾಗೂ ಮಹಿಳೆ ನಡುವೆ ಅನೈತಿಕ ಸಂಬಂಧವಿದ್ದು, ಮಹಿಳೆಯ ಮಾವ ಹಲವು ಬಾರಿ ಬುದ್ಧಿವಾದ ಹೇಳಿದ್ದನೆನ್ನಲಾಗಿದೆ.

ಆದರೂ, ಮಾವನ ಮಾತು ಕೇಳದ ಮಹಿಳೆ ಮನೆಯಲ್ಲಿಯೇ ವ್ಯಕ್ತಿಯನ್ನು ಸೇರುತ್ತಿದ್ದಳು. ಇದರಿಂದ ಆಕ್ರೋಶಗೊಂಡ ಮಾವ, ಇಬ್ಬರೂ ಜೊತೆಯಾಗಿದ್ದಾಗಲೇ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...