alex Certify
ಕನ್ನಡ ದುನಿಯಾ       Mobile App
       

Kannada Duniya

ಸಾವಿಗೆ ಕಾರಣವಾಯ್ತು ಲವ್ ಮ್ಯಾರೇಜ್..?

murder 31

ತಮಿಳುನಾಡಿನಲ್ಲಿ ತಲ್ಲಣ ಮೂಡಿಸಿದ್ದ ಮರ್ಯಾದಾಗೇಡಿ ಹತ್ಯೆ ನೆನಪು ಮಾಸುವ ಮೊದಲೇ, ಅದೇ ರೀತಿಯ ಪ್ರಕರಣವೊಂದು ಬೆಂಗಳೂರಿನಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಥಳಿಸಿ ಕೊಲೆ ಮಾಡಿದ್ದಾರೆ.

ಬೆಂಗಳೂರಿನ ಐಬಿಎಂ ನಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಎಂಬಾತ ಕೊಲೆಯಾದ ವ್ಯಕ್ತಿ. ಇತ್ತೀಚೆಗಷ್ಟೆ ಅವರು ಅಂತರ್ಜಾತಿ ವಿವಾಹವಾಗಿದ್ದು. ರಾತ್ರಿ ಪಾಳಿಯ ಕೆಲಸ ಮುಗಿಸಿ, ಮನೆಗೆ ಹೋಗುವ ಸಂದರ್ಭದಲ್ಲಿ, ಪಂತರಪಾಳ್ಯ ಎಂಬಲ್ಲಿ ಆಟೋದಲ್ಲಿ ಬಂದ ದುಷ್ಕರ್ಮಿಗಳು, ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ್ದ ಬ್ಯಾಟರಾಯನಪುರ ಠಾಣೆ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಕೇಸು ದಾಖಲಿಸಿಕೊಂಡು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಅಭಿಷೇಕ್ ಮನೆಯವರ ವಿರೋಧದ ನಡುವೆಯೂ, 4 ತಿಂಗಳ ಹಿಂದೆ ಪ್ರೀತಿಸಿದ ಯುವತಿಯನ್ನು ಮದುವೆಯಾಗಿದ್ದು, ಇದೇ ವಿಚಾರಕ್ಕೆ ಕೊಲೆ ನಡೆದಿರಬಹುದೆಂದು ಹೇಳಲಾಗಿದೆ. ಅಲ್ಲದೇ, ಅಭಿಷೇಕ್ ಆಸ್ತಿ ವಿಚಾರಕ್ಕೆ ಸಂಬಂಧಿಯೊಂದಿಗೆ ಜಗಳವಾಡಿಕೊಂಡಿದ್ದು, ಅದು ಕೂಡ ಕಾರಣವಿರಬಹುದೆಂದು ಹೇಳಲಾಗುತ್ತಿದ್ದು, ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...