alex Certify
ಕನ್ನಡ ದುನಿಯಾ       Mobile App
       

Kannada Duniya

ಮಚ್ಚಿನೇಟಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಪತ್ರಕರ್ತ

Crime14

ಮೈಸೂರು: ಮೈಸೂರಿನಲ್ಲಿ ಬಿಜೆಪಿ ಮುಖಂಡ ರಾಜು ಅವರನ್ನು, ಉದಯಗಿರಿಯ ಎಂ.ಜಿ. ರಸ್ತೆಯಲ್ಲಿ ಹತ್ಯೆ ಮಾಡಿದ ನಂತರ ಉದ್ವಿಗ್ನ ಸ್ಥಿತಿ ಉಂಟಾಗಿದ್ದು, ಪರಿಸ್ಥಿತಿ ತಿಳಿಯಾಗಿಸಲು ಪೊಲೀಸರು ಎಷ್ಟೆಲ್ಲಾ ಪ್ರಯತ್ನ ನಡೆಸಿದ್ದಾರೆ.

ರಾಜು ಹತ್ಯೆಯ ನಂತರ ಮೈಸೂರು ಬಂದ್ ಕೂಡ ನಡೆದು, ಬಿಗುವಿನ ವಾತಾವರಣ ಉಂಟಾಗಿತ್ತು. ರಾಜು ಅವರ ಸ್ವಗ್ರಾಮ ಕ್ಯಾತಮಾರನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಯಿತು. ಈ ಸಂದರ್ಭದಲ್ಲಿ ಕೆಲವರು ಕಲ್ಲು ತೂರಾಟ ನಡೆಸಿದ್ದು, ಅದನ್ನು ಚಿತ್ರೀಕರಿಸಲು ಹೋದ ಪತ್ರಕರ್ತರ ಮೇಲೆ ಕೆಲವು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಈ ಟಿವಿ ನ್ಯೂಸ್ ವರದಿಗಾರನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲು ಯತ್ನಿಸಲಾಗಿದೆ.

ಅವರು ಅಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿರುವ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅಂತ್ಯ ಸಂಸ್ಕಾರ ಮುಗಿದ ನಂತರದಲ್ಲಿ ಕೆಲವರು ಕಲ್ಲು ತೂರಾಟ ಮಾಡಿದ್ದು, ಮತ್ತೆ ಕೆಲವರು ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರು ಕೂಡಲೇ ಕ್ರಮ ಕೈಗೊಂಡು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...