alex Certify
ಕನ್ನಡ ದುನಿಯಾ       Mobile App
       

Kannada Duniya

ನಂದಿಬೆಟ್ಟದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಪತ್ತೆ

nandi

ಚಿಕ್ಕಬಳ್ಳಾಪುರ: ನಂದಿಬೆಟ್ಟ ಗಿರಿಧಾಮದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ಪತ್ತೆಯಾಗಿದ್ದು, ಆಕೆಯನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ.

ನಂದಿಬೆಟ್ಟದ ಅರ್ಕಾವತಿ ಉಗಮ ಸ್ಥಾನ ಸಮೀಪದ ಪೊದೆಯಲ್ಲಿ ಬಿದ್ದಿದ್ದ ಯುವತಿಗೆ ತರಚಿದ ಗಾಯಗಳಾಗಿವೆ. ಬೆಂಗಳೂರು ಕೆಂಪಾಪುರ ನಿವಾಸಿಯಾಗಿರುವ ವಿದ್ಯಾರ್ಥಿನಿ, ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿ.ಯು.ಸಿ. ಓದುತ್ತಿದ್ದಾಳೆ ಎನ್ನಲಾಗಿದೆ.

ಆಕೆಯನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದ್ದು, ನಂದಿ ಗಿರಿಧಾಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Email *

Get latest updates on your inbox...

Opinion Poll

  • 500 ಮತ್ತು 1000 ರೂ. ನೋಟುಗಳ ನಿಷೇಧದಿಂದ ಕಪ್ಪು ಹಣಕ್ಕೆ ಕಡಿವಾಣ ಬೀಳಲಿದೆಯಾ..?

    View Results

    Loading ... Loading ...