alex Certify
ಕನ್ನಡ ದುನಿಯಾ       Mobile App
       

Kannada Duniya

ಮಧ್ಯರಾತ್ರಿ ಚಿಕ್ಕಪ್ಪನಿಗೆ ಕೊಡಲಿ ಏಟು ನೀಡ್ದ

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಚಿಕ್ಕಪ್ಪ ಹಾಗೂ ಚಿಕ್ಕಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಚಿಕ್ಕಪ್ಪ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಚಿಕ್ಕಮ್ಮನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಪ್ರದೇಶದ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಾಹಿತಿ ಪ್ರಕಾರ ತನ್ನ ಹೆಸರಿಗೆ ಆಸ್ತಿ ಬರೆಯುವಂತೆ ಮನೋಜ್, ಚಿಕ್ಕಪ್ಪ ರಾಜೇಂದ್ರನಿಗೆ ಒತ್ತಾಯ ಮಾಡುತ್ತಿದ್ದ ಎನ್ನಲಾಗಿದೆ. ಆದ್ರೆ ಚಿಕ್ಕಪ್ಪ ಇದಕ್ಕೆ ಒಪ್ಪಿರಲಿಲ್ಲ. ಇದ್ರಿಂದ ಕೋಪಗೊಂಡ ಮನೋಜ್ ಮಧ್ಯರಾತ್ರಿ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ. ಪತಿಯನ್ನು ರಕ್ಷಿಸಲು ಬಂದ ಚಿಕ್ಕಮ್ಮನಿಗೂ ಗಾಯಗಳಾಗಿವೆ. ಆಕೆಯನ್ನು ಝಾನ್ಸಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜೇಂದ್ರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಚಿಕ್ಕಮ್ಮನ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ. ಮನೋಜ್ ವಿರುದ್ಧ ಕೊಲೆ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಆದ್ರೆ ಈವರೆಗೂ ಮನೋಜ್ ಪೊಲೀಸ್ ಕೈಗೆ ಸಿಕ್ಕಿಲ್ಲ.

 

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...