alex Certify
ಕನ್ನಡ ದುನಿಯಾ       Mobile App
       

Kannada Duniya

ಅಂತರ್ಜಾತಿ ವಿವಾಹವಾಗಿದ್ದ ಯುವಕನ ಮೇಲೆ ಹಲ್ಲೆ

ಹೈದರಾಬಾದ್: ದಲಿತ ಕ್ರೈಸ್ತ ಕುಟುಂಬಕ್ಕೆ ಸೇರಿದ ಯುವಕನೊಂದಿಗೆ ಮಗಳು ವಿವಾಹವಾಗಿದ್ದಾಳೆ ಎಂಬ ಕಾರಣಕ್ಕೆ ಯುವತಿಯ ತಂದೆ ನವವಿವಾಹಿತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ನಲ್ಗೊಂಡ ಜಿಲ್ಲೆಯಲ್ಲಿ ನಡೆದಿರುವ ಪ್ರಕರಣದಲ್ಲಿ ಕೆಲ ದಿನಗಳ ಹಿಂದೆಯಷ್ಟೆ ಮದುವೆಯಾಗಿದ್ದ ಸಂದೀಪ್ ಹಾಗೂ ಮಾಧುರಿ ಇಬ್ಬರು ಬೇರೆ ಜಾತಿಯವರಾಗಿದ್ದರು. ಈ ವಿವಾಹವನ್ನು ಮಾಧುರಿ ತಂದೆ ಒಪ್ಪಿರಲಿಲ್ಲ. ಆದರೂ ವಿವಾಹವಾಗಿದ್ದರಿಂದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆದ ಬಳಿಕ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರಿಂದ, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನವವಿವಾಹಿತರ ಮೇಲೆ ನಡೆದಿರುವ ಹಲ್ಲೆ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಬೈಕ್‌ನಲ್ಲಿ ತೆರಳುತ್ತಿರುವಾಗ ವ್ಯಕ್ತಿಯೊಬ್ಬ, ದಂಪತಿ ಮೇಲೆ ಹಲ್ಲೆ ನಡೆಸಿದ್ದಾನೆ. ಈ ದೃಶ್ಯಾವಳಿಗಳನ್ನು ಇಟ್ಟುಕೊಂಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಬಗ್ಗೆ ಸಂದೀಪ್ ಸ್ನೇಹಿತರು ಪ್ರತಿಕ್ರಿಯಿಸಿದ್ದು, ಮದುವೆ ಯುವತಿಯ ತಂದೆ ಒಪ್ಪಿರಲಿಲ್ಲ. ಆದರೆ ಮದುವೆಯಾದ ಬಳಿಕ, ಇಬ್ಬರಿಗೂ ಬಟ್ಟೆ ಕೊಡಿಸುವುದಾಗಿ ಎರಗಡ್ಡ ಪ್ರದೇಶಕ್ಕೆ ಬರುವಂತೆ ಹೇಳಿದ್ದರು. ಜೋಡಿ ಅಲ್ಲಿಗೆ ಹೋದಾಗ ಈ ಹಲ್ಲೆ ನಡೆಸಲಾಗಿದೆ ಎಂದಿದ್ದಾರೆ. ಪ್ರಕರಣ ಸಂಬಂಧ ಮಾವನನ್ನು ಸೇರಿ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...