alex Certify
ಕನ್ನಡ ದುನಿಯಾ       Mobile App
       

Kannada Duniya

ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ಇಂಥ ಕೆಲಸ ಮಾಡಿದ್ಲು ವಿದ್ಯಾರ್ಥಿನಿ

ದೆಹಲಿ ಸಮೀಪದ ನೋಯ್ಡಾದಲ್ಲಿ ಮನಕಲಕುವ ಘಟನೆ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಇಬ್ಬರು ಅಧ್ಯಾಪಕರು ಹಾಗೂ ಶಾಲಾ ಆಡಳಿತ ಮಂಡಳಿ ಕಾರಣ ಎನ್ನಲಾಗ್ತಿದೆ.

ಶಾಲೆಯ ಇಬ್ಬರು ಶಿಕ್ಷಕರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಫೇಲ್ ಮಾಡುವುದಾಗಿ ಬೆದರಿಕೆ ಒಡ್ಡುತ್ತಿದ್ದರಂತೆ. ಇದ್ರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಕುಟುಂಬಸ್ಥರು ದೂರಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆ ಶುರು ಮಾಡಿದ್ದಾರೆ.

ವಿದ್ಯಾರ್ಥಿನಿ ಮೃತದೇಹದ ಬಳಿ ಯಾವುದೇ ಪತ್ರ ಸಿಕ್ಕಿಲ್ಲ. ವಿದ್ಯಾರ್ಥಿನಿ 9ನೇ ಕ್ಲಾಸ್ ನಲ್ಲಿ ಎರಡು ವಿಷ್ಯದಲ್ಲಿ ಫೇಲ್ ಆಗಿದ್ದಳು ಎನ್ನಲಾಗಿದೆ. ಶಿಕ್ಷಕರಿಬ್ಬರು ನಾನು ಪಾಸ್ ಆಗಲು ಬಿಡುವುದಿಲ್ಲವೆಂದು ವಿದ್ಯಾರ್ಥಿನಿ ತಂದೆಗೆ ಹೇಳಿದ್ದಳಂತೆ.ಅಲಕಾನ್ ಪಬ್ಲಿಕ್ ಸ್ಕೂಲಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿಕ್ಷಕರು ಸದಾ ಕಿರುಕುಳ ನೀಡ್ತಾರೆಂದು ವಿದ್ಯಾರ್ಥಿನಿ ಹೇಳಿದ್ದಳು ಎನ್ನಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...