alex Certify
ಕನ್ನಡ ದುನಿಯಾ       Mobile App
       

Kannada Duniya

ಆಸ್ಪತ್ರೆಯಲ್ಲೇ ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ

date_rape-59779631

ಮಥುರಾದ ಆಸ್ಪತ್ರೆಯೊಂದರಲ್ಲಿ 25 ವರ್ಷದ ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಆಸ್ಪತ್ರೆಯ ಸೂಪರಿಟೆಂಡೆಂಟ್ ಸೇರಿದಂತೆ ಮೂವರು ಕಾಮುಕ ಸಿಬ್ಬಂದಿ ಈ ಕೃತ್ಯ ಎಸಗಿದ್ದಾರೆ. ಬುಧವಾರ ಈ ಘಟನೆ ನಡೆದಿದ್ದು, ದೌರ್ಜನ್ಯಕ್ಕೊಳಗಾದ ನರ್ಸ್ ಕುಟುಂಬದವರು ಎಫ್ ಐ ಆರ್ ದಾಖಲು ಮಾಡಿದ್ದಾರೆ.

ಅತ್ಯಾಚಾರ ಸಂತ್ರಸ್ಥೆಯನ್ನು ಜಿಲ್ಲಾ ಮಹಿಳಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಅಂತಾ ಎಎಸ್ಪಿ ಕನ್ವರ್ ಅನುಪಮ್ ಸಿಂಗ್ ತಿಳಿಸಿದ್ದಾರೆ. ಚಂದ್ರಕಲಾ ಎಂಬ ಖಾಸಗಿ ಆಸ್ಪತ್ರೆಯ ಸೂಪರಿಟೆಂಡೆಂಟ್ ಆಗಿರೋ ಡಾ.ಕುಶಾಲ್ ಪಾಲ್, ಆತನ ಭಾವ ಪ್ರಮೋದ್ ಹಾಗೂ ಸಿಬ್ಬಂದಿ ರೂಪ್ ಕಿಶೋರ್ ಮತ್ತು ಶ್ರೀಕೃಷ್ಣ ಉಪಾಧ್ಯಾಯ ನಾಲ್ವರೂ ಸೇರಿಕೊಂಡು ದಾದಿಯನ್ನು ಕೋಣೆಗೆ ಬಲವಂತವಾಗಿ ಎಳೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಘಟನೆಯಿಂದ ದೈಹಿಕ ಹಾಗೂ ಮಾನಸಿಕವಾಗಿ ಜರ್ಜರಿತಗೊಂಡಿದ್ದ ನರ್ಸ್, ಘಟನೆಯ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...