alex Certify
ಕನ್ನಡ ದುನಿಯಾ       Mobile App
       

Kannada Duniya

ಆದಿವಾಸಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಿನ್ಸಿಪಾಲ್

ಒಡಿಶಾ ಪೊಲೀಸರು ಆದಿವಾಸಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಶೋಷಣೆ ನೀಡಿದ ಪ್ರಿನ್ಸಿಪಾಲ್ ಹುಡುಕಾಟ ಶುರು ಮಾಡಿದ್ದಾರೆ. ಪ್ರಿನ್ಸಿಪಾಲ್ ವಿರುದ್ಧ 21 ಆದಿವಾಸಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ದೂರು ದಾಖಲಾಗಿದೆ.

ಆರೋಪಿ ಭುವನೇಶ್ವರದಿಂದ ಸುಮಾರು 278 ಕಿಲೋಮೀಟರ್ ದೂರದಲ್ಲಿರುವ ಸುಂದರಗಢ್ ಪ್ರೌಢಶಾಲೆಯ ಪ್ರಿನ್ಸಿಪಾಲ್ ಆಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಶುರುವಾಗಿದೆ. ಶೀಘ್ರದಲ್ಲಿ ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರೋಪಿ ಪ್ರಿನ್ಸಿಪಾಲ್ ವಿರುದ್ಧ ಹಿಂದಿನ ತಿಂಗಳು ವಿದ್ಯಾರ್ಥಿನಿಯರು ದೂರು ನೀಡಿದ್ದರು. 10ನೇ ತರಗತಿ ಪರೀಕ್ಷೆಗೆ ಸಹಾಯ ಮಾಡುವುದಾಗಿ ಪರೀಕ್ಷಾ ಕೇಂದ್ರದ ಬಳಿ ಮನೆ ನೀಡಿದ್ದ ಪ್ರಿನ್ಸಿಪಾಲ್ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದನಂತೆ. ಫೆಬ್ರವರಿ 23ರಂದು ಪ್ರಿನ್ಸಿಪಾಲ್ ವಿದ್ಯಾರ್ಥಿನಿಯರಿಗೆ ಬೆದರಿಸಿದ್ದ ಎನ್ನಲಾಗಿದೆ. ಮಾರ್ಚ್ 3ರಂದು ಪರೀಕ್ಷೆ ಮುಗಿಸಿ ಮನೆಗೆ ಬಂದ ವಿದ್ಯಾರ್ಥಿನಿಯರು ಈ ಬಗ್ಗೆ ಮನೆಯವರಿಗೆ ತಿಳಿಸಿದ್ದರು.

 

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...