alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್! 50,000 ಕ್ಕೂ ಅಧಿಕ ಮಂದಿ ಪಡೆದಿದ್ದಾರೆ ನಕಲಿ ಪದವಿ

ರಾಷ್ಟ್ರ ರಾಜಧಾನಿ ನವದೆಹಲಿ ಪೊಲೀಸರು ನಕಲಿ ಡಿಗ್ರಿ ನೀಡುವ ಭಾರೀ ಜಾಲವೊಂದನ್ನು ಭೇದಿಸಿದ್ದು, ಈವರೆಗೆ 50,000 ಕ್ಕೂ ಅಧಿಕ ಮಂದಿಗೆ ನಕಲಿ ಪದವಿ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿ ವಿತರಿಸಿರುವುದು ತನಿಖೆ ವೇಳೆ ಕಂಡು ಬಂದಿದೆ. ಆಘಾತಕಾರಿ ಸಂಗತಿ ಎಂದರೆ ಇದರ ಆಧಾರದ ಮೇಲೆ ಹಲವು ಮಂದಿ ಸರ್ಕಾರಿ ನೌಕರಿಯನ್ನೂ ಗಿಟ್ಟಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಪರೀಕ್ಷೆ ಬರೆಯದೇ ಅಂಕಪಟ್ಟಿ ಗಿಟ್ಟಿಸಿಕೊಂಡವನೊಬ್ಬ ಪಾಸ್ ಪೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇದು ನಕಲಿ ಎನ್ನುವ ಕಾರಣಕ್ಕೆ ಆತನ ಪಾಸ್ ಪೋರ್ಟ್ ಅರ್ಜಿಯನ್ನು ತಿರಸ್ಕರಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಆತ ಪೊಲೀಸರಿಗೆ ದೂರು ಸಲ್ಲಿಸಿದ್ದು, ತನಿಖೆ ಕೈಗೊಂಡ ಪೊಲೀಸರು ಪ್ರಕರಣದ ಬೆನ್ನತ್ತಿದಾಗ ಅಕ್ರಮ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಕಜ್ ಅರೋರ, ಪವಿತ್ತರ್ ಸಿಂಗ್ ಹಾಗೂ ಗೋಪಾಲ್ ಕೃಷ್ಣನ್ ಎಂಬುವರನ್ನು ಬಂಧಿಸಲಾಗಿದೆ. ಇನ್ನೂ ಮೂವರು ನಾಪತ್ತೆಯಾಗಿದ್ದು ಅವರುಗಳ ಬಂಧನಕ್ಕೆ ಬಲೆ ಬೀಸಲಾಗಿದೆ.

ಲೂಧಿಯಾನದಲ್ಲಿ ಪ್ರಿಂಟಿಂಗ್ ಪ್ರೆಸ್ ನಡೆಸುತ್ತಿದ್ದ ಕೃಷ್ಣನ್ ಅಲ್ಲಿ ನಕಲಿ ಪದವಿ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಗಳನ್ನು ಮುದ್ರಿಸುತ್ತಿದ್ದನೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...