alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ

accident nmನಿಧಾನವೇ ಪ್ರಧಾನ, ಅವಸರವೇ ಅಪಘಾತಕ್ಕೆ ಕಾರಣ ಎನ್ನುತ್ತಾರೆ. ಆದರೂ, ವಾಹನ ಸವಾರರು ಅತಿವೇಗದಿಂದ, ಅಜಾಗರೂತೆಯಿಂದ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣರಾಗುತ್ತಾರೆ. ಇಂತಹ ಹಲವಾರು ಪ್ರಕರಣಗಳು ನಡೆದಿವೆ. ಹೀಗೆ ಭಯಾನಕ ಅಪಘಾತವೊಂದರ ಚಿತ್ರಣ ಇಲ್ಲಿದೆ ನೋಡಿ,

ಪಂಜಾಬ್ ನ ಪಾಟಿಯಾಲದಲ್ಲಿ ನಡೆದ ಅಪಘಾತವೊಂದರ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ. ಐಷಾರಾಮಿ ಕಾರೊಂದರಲ್ಲಿ ಅತಿವೇಗವಾಗಿ ಚಾಲನೆ ಮಾಡಿಕೊಂಡು ಬಂದ ಚಾಲಕ ಎದುರುಗಡೆ ಬಂದ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸುಮಾರು 20 ಅಡಿ ದೂರಕ್ಕೆ ಹಾರಿ ಬಿದ್ದಿದ್ದಾನೆ. ಬಳಿಕ ಕಾರು ಕಾಂಪೌಂಡ್ ಒಂದಕ್ಕೆ ಗುದ್ದಿದ್ದು, ಇಡೀ ಕಾಂಪೌಂಡ್ ಪೀಸ್ ಪೀಸ್ ಆಗಿದೆ. ಗೇಟ್ ದೂರಕ್ಕೆ ಹಾರಿ ಬಿದ್ದಿದ್ದು, ಮತ್ತೊಂದು ಮನೆಗೆ ಕಾರು ಡಿಕ್ಕಿ ಹೊಡೆದು ನಿಂತಿದೆ.

ಕೇಸ್ ದಾಖಲಿಸಿಕೊಂಡಿರುವ ಪಾಟಿಯಾಲ ಪೊಲೀಸರು ಕಾರ್ ಚಾಲಕನನ್ನು ಬಂಧಿಸಿದ್ದಾರೆ. ಈ ದೃಶ್ಯಗಳೆಲ್ಲಾ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಭಯಾನಕ ದೃಶ್ಯಗಳನ್ನು ನೋಡಿದವರು ಬೆಚ್ಚಿ ಬಿದ್ದಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...