alex Certify
ಕನ್ನಡ ದುನಿಯಾ       Mobile App
       

Kannada Duniya

ವಿವಿ ಉದ್ಯೋಗಿ ಮೇಲೆ ಕುಲಪತಿಯಿಂದಲೇ ಅತ್ಯಾಚಾರ

Rape victim

ಬೆಂಗಳೂರು: ಹೆಣ್ಣುಮಕ್ಕಳು ಕೆಲಸ ಮಾಡುವ ಸ್ಥಳಗಳಲ್ಲಿ ಮೇಲಿನ ಅಧಿಕಾರಿಗಳಿಂದ ಕೆಲವೊಮ್ಮೆ ದೌರ್ಜನ್ಯ ನಡೆಯುತ್ತವೆ. ಹೀಗೆ, ಮಹಿಳಾ ಉದ್ಯೋಗಿಯೊಬ್ಬರ ಮೇಲೆ ಕುಲಪತಿಯೊಬ್ಬರು ಅತ್ಯಾಚಾರ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅಲಾಯನ್ಸ್ ವಿಶ್ವವಿದ್ಯಾಲಯದ ಕುಲಪತಿ ಡಾ. ಮಧುಕರ್ ಜಿ. ಗಂಗೂರ್ ಅವರು ಅತ್ಯಾಚಾರ ಎಸಗಿದ ಆರೋಪ ಹೊತ್ತವರು. ವಿಶ್ವವಿದ್ಯಾಲಯದ 32 ವರ್ಷದ ಮಹಿಳಾ ಉದ್ಯೋಗಿಯೊಬ್ಬರ ಮೇಲೆ ಕಳೆದ ಎರಡು ವರ್ಷಗಳಿಂದ ಬೆದರಿಸಿ ಅತ್ಯಾಚಾರ ಎಸಗಿದ್ದಾರೆ. ಇದರಿಂದ ಉದ್ಯೋಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಆಕೆಯ ತಾಯಿ ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಗ ಪರೀಕ್ಷೆ ನಡೆಸಿ, ಚಿಕಿತ್ಸೆ ನೀಡಿದ ವೈದ್ಯರು ಅತ್ಯಾಚಾರ ನಡೆದಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಉದ್ಯೋಗಿಯ ತಾಯಿ ಬೆಂಗಳೂರು ಮಡಿವಾಳ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಕೇಸು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಉದ್ಯೋಗಿಗೆ ಜೀವ ಬೆದರಿಕೆ ಹಾಕಿ ಅತ್ಯಾಚಾರ ಎಸಗಿರುವ ಬಗ್ಗೆ ತನಿಖೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...