alex Certify
ಕನ್ನಡ ದುನಿಯಾ       Mobile App
       

Kannada Duniya

ಅಪ್ರಾಪ್ತೆ ಮೇಲೆ ಟ್ರಕ್ ಚಾಲಕನಿಂದ ಅತ್ಯಾಚಾರ

crime uiop

ಹೆಣ್ಣುಮಕ್ಕಳನ್ನು ವಂಚಿಸಿ ದೌರ್ಜನ್ಯ ಎಸಗುವ ಪ್ರಕರಣ ಮರುಕಳಿಸುತ್ತಿದ್ದು, ಇದಕ್ಕೆ ಪೂರಕ ಉದಾಹರಣೆ ಎನ್ನುವಂತಹ ಪ್ರಕರಣವೊಂದು ಇಲ್ಲಿದೆ ನೋಡಿ. ಮೈಸೂರಿನ ಅಪ್ರಾಪ್ತ ಬಾಲಕಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿದ ವಂಚಕನೊಬ್ಬ ಸಿಕ್ಕಿಬಿದ್ದಿದ್ದಾನೆ.

ಮೈಸೂರಿನ 13 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಆರೋಪದ ಮೇಲೆ ಟ್ರಕ್ ಚಾಲಕನೊಬ್ಬನನ್ನು ಬಂಧಿಸಲಾಗಿದೆ. ರಾಜಸ್ತಾನದ ಅಲ್ದಾರ್ ಜಿಲ್ಲೆಯ ಪಿಜಾರ್ ತಾಲ್ಲೂಕಿನ ಲಪ್ಪಾಲ ಗ್ರಾಮದ ರವಿ ಎಂಬ 21 ವರ್ಷದ ಯುವಕನನ್ನು ಮೈಸೂರಿನ ನರಸಿಂಹರಾಜ ಠಾಣೆಯ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಈತ 13 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ರಾಜಸ್ತಾನಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ.

ಜನವರಿ 9 ರಂದು ಮೈಸೂರು ನರಸಿಂಹರಾಜ ಠಾಣೆಯ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಆರೋಪಿ, ಬಾಲಕಿಯನ್ನು ಬಿಡಲು ಬೆಂಗಳೂರು ರೈಲ್ವೇ ನಿಲ್ದಾಣಕ್ಕೆ ಬಂದಿದ್ದ ಸಂದರ್ಭದಲ್ಲಿ ಕಾರ್ಯಾಚರಣೆ ನಡೆಸಿ ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...