alex Certify
ಕನ್ನಡ ದುನಿಯಾ       Mobile App
       

Kannada Duniya

ಶಿಕ್ಷಕ ಮಾಡಿದ್ದಾನೆ ಇಂತ ಹೀನ ಕೃತ್ಯ

arrestಮಕ್ಕಳಿಗೆ ನೈತಿಕತೆಯ ಪಾಠ ಹೇಳಿಕೊಡಬೇಕಾದ ಶಿಕ್ಷಕನೊಬ್ಬ ಹೀನ ಕೃತ್ಯವೆಸಗಿದ್ದಾನೆ. ಈತ ಶತಾಬ್ದಿ ಹಾಗೂ ರಾಜಧಾನಿ ಎಕ್ಸ್ ಪ್ರೆಸ್ ರೈಲಿನಲ್ಲಿ ಸಹ ಪ್ರಯಾಣಿಕರ ಲ್ಯಾಪ್ ಟಾಪ್ ಸೇರಿದಂತೆ ಹಲವು ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡುತ್ತಿದ್ದು, ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ದೆಹಲಿಯ ಸಂಗಮ್ ವಿಹಾರ್ ಪ್ರದೇಶದ ಪ್ರೈಮರಿ ಶಾಲೆಯಲ್ಲಿ ಶಿಕ್ಷಕನಾಗಿದ್ದ ಈತ, ರೈಲುಗಳಲ್ಲಿ ಪ್ರಯಾಣಿಕನ ಸೋಗಿನಲ್ಲಿ ಹೋಗುತ್ತಿದ್ದನಲ್ಲದೇ ಸಹ ಪ್ರಯಾಣಿಕರ ಬೆಲೆ ಬಾಳುವ ವಸ್ತುಗಳನ್ನು ದೋಚಿ ಬಳಿಕ ಅವುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ.

ಮಾರ್ಚ್ 10 ರಂದು ಶತಾಬ್ದಿ ಎಕ್ಸ್ ಪ್ರೆಸ್ ನಲ್ಲಿ ದೆಹಲಿಯಿಂದ ಮೀರತ್ ಗೆ ಪ್ರಯಾಣಿಸುತ್ತಿದ್ದ ಐಐಎಂ ವಿದ್ಯಾರ್ಥಿನಿಯೊಬ್ಬಳು ತನ್ನ ಲ್ಯಾಪ್ ಟಾಪ್ ಕಳುವಾಗಿದ್ದರ ಕುರಿತು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿದ ವೇಳೆ ಶಿಕ್ಷಕನ ಬಣ್ಣ ಬಯಲಾಗಿದೆ. ಈತನನ್ನು ಬಂಧಿಸಿರುವ ಪೊಲೀಸರು ಸೇನಾಧಿಕಾರಿಯೊಬ್ಬರಿಗೆ ಸೇರಿದ ಎರಡು ಮೊಬೈಲ್ ಫೋನ್, ಎಟಿಎಂ ಕಾರ್ಡ್ ಹಾಗೂ ಪ್ರಮುಖ ದಾಖಲೆಗಳನ್ನು ಈತನಿಂದ ವಶಕ್ಕೆ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...