alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಡಹಗಲೇ ಯುವತಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿದ್ದವನ ಅರೆಸ್ಟ್

rapist surrenderಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳನ್ನು ಹಾಡಹಗಲೇ ಎಳೆದೊಯ್ದು ಅತ್ಯಾಚಾರವೆಸಗಿದ್ದ ಘಟನೆ ಪಂಜಾಬ್ ನ ಮುಕ್ತಸರ್ ಜಿಲ್ಲೆಯಲ್ಲಿ ನಡೆದಿದ್ದು, ರಕ್ಷಣೆಗಾಗಿ ಯುವತಿ ಮೊರೆಯಿಟ್ಟರೂ ಯಾರೊಬ್ಬರೂ ಆಕೆಯ ನೆರವಿಗೆ ಧಾವಿಸದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಈ ಘಟನೆ ಮಾರ್ಚ್ 25 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಂಪ್ಯೂಟರ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ 20 ವರ್ಷದ ಯುವತಿಯನ್ನು ಗುರಿಂದರ್ ಎಂಬಾತ ಎಳೆದೊಯ್ದಿದ್ದಾನೆ. ಈ ಸಂದರ್ಭದಲ್ಲಿ ಯುವತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಲ್ಲದೇ ಸಹಾಯಕ್ಕಾಗಿ ಕೂಗಿಕೊಂಡಿದ್ದಾಳೆ.

ಆದರೆ ಯಾರೊಬ್ಬರೂ ಆಕೆಯ ಸಹಾಯಕ್ಕೆ ಧಾವಿಸಿಲ್ಲ. ಯುವತಿಯನ್ನು ಕಾರಿನಲ್ಲಿ ಕರೆದೊಯ್ದ ಆರೋಪಿ ಫಾರ್ಮ್ ಹೌಸ್ ನಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿ ಮಾರನೇ ದಿನ ಬಿಡುಗಡೆಗೊಳಿಸಿದ್ದ. ಘಟನೆ ನಡೆದ ಐದು ದಿನಗಳ ಬಳಿಕ ಯುವತಿ ದೂರು ದಾಖಲಿಸಿದ್ದು, ಇದೀಗ ಆರೋಪಿ ನ್ಯಾಯಾಲಯಕ್ಕೆ ಶರಣಾದ ವೇಳೆ ಆತನನ್ನು ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...