alex Certify
ಕನ್ನಡ ದುನಿಯಾ       Mobile App
       

Kannada Duniya

ಲಾಡ್ಜ್ ಮೇಲೆ ದಾಳಿ, ಬಯಲಾಯ್ತು ವೇಶ್ಯಾವಾಟಿಕೆ

Urban Nightlife

ಬೆಂಗಳೂರು: ವೇಶ್ಯಾವಾಟಿಕೆ ನಿಯಂತ್ರಣಕ್ಕೆ ಏನೆಲ್ಲಾ ಕ್ರಮಕೈಗೊಂಡಿದ್ದರೂ, ಸಂಪೂರ್ಣವಾಗಿ ನಿಂತಿಲ್ಲ. ಬೇರೆ, ಬೇರೆ ರೂಪಗಳಲ್ಲಿ, ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿದ್ದು, ಇಂತಹ ಅಡ್ಡೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರು ಕಾಮಾಕ್ಷಿಪಾಳ್ಯದಲ್ಲಿರುವ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಪಡೆದುಕೊಂಡ ಸಿಸಿಬಿ ಪೊಲೀಸರು, ದಿಢೀರ್ ದಾಳಿ ಮಾಡಿದ್ದಾರೆ. ದಾಳಿಯ ಸಂದರ್ಭದಲ್ಲಿ 6 ಮಂದಿಯನ್ನು ಬಂಧಿಸಿದ್ದು, ವಿವಿಧ ರಾಜ್ಯಗಳ ಯುವತಿಯರು ಸೇರಿ ಐವರನ್ನು ರಕ್ಷಿಸಿದ್ದಾರೆ. ಯುವತಿಯರಿಗೆ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಬಂದು, ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ್ದರು. ಈ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ದಾಳಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಬಂಧಿತರಲ್ಲಿ ಓರ್ವ ಮಹಿಳೆ ಹಾಗೂ ಐವರು ಪುರುಷರಿದ್ದು, ಇವರೆಲ್ಲಾ ದಂಧೆಯಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾಗಿದೆ. ಬಂಧಿತರಿಂದ 7 ಮೊಬೈಲ್, 9000 ರೂ. ನಗದು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...