alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರವೆಸಗಿದ್ದವರಿಗೆ 11 ವರ್ಷಗಳ ಬಳಿಕ ಶಿಕ್ಷೆ

jail barಭಾರತದಲ್ಲಿ ನ್ಯಾಯದಾನ ವಿಳಂಬ ಎಂದು ಹೇಳಲಾಗುತ್ತದೆ. ಈ ಕಾರಣಕ್ಕಾಗಿಯೇ ಅತ್ಯಾಚಾರದಂತ ಪ್ರಕರಣಗಳ ವಿಚಾರಣೆ ತ್ವರಿತಗತಿಯಲ್ಲಿ ನಡೆದು ಆರೋಪಿಗಳಿಗೆ ಶಿಕ್ಷೆ ಕೊಡಿಸಬೇಕೆಂದು ವಿಶೇಷ ನ್ಯಾಯಾಲಯಗಳನ್ನು ಸರ್ಕಾರ ಸ್ಥಾಪಿಸುತ್ತಿದೆ. ಈ ಮಧ್ಯೆ 11 ವರ್ಷಗಳ ಹಿಂದೆ ನಡೆದ ಸಾಮೂಹಿಕ ಅತ್ಯಾಚಾರವೊಂದರ ತೀರ್ಪು ಈಗ ಹೊರ ಬಿದ್ದಿದೆ.

2005 ರ ಮೇ 2 ರಂದು ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಸಹೋದರನೊಂದಿಗೆ ಬರುತ್ತಿದ್ದ ವೇಳೆ ಸ್ಯಾಂಟ್ರೋ ಕಾರಿನಲ್ಲಿ ಬಂದವರು ಆಕೆಯನ್ನು ಅಪಹರಿಸಿ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರವೆಸಗಿದ್ದರು. ಈ ಪ್ರಕರಣದಲ್ಲಿ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಪ್ರಭಾವಿ ನಾಯಕರೊಬ್ಬರ ಸಂಬಂಧಿ ಗೌರವ್ ಶುಕ್ಲಾ ಪ್ರಮುಖ ಆರೋಪಿಯಾಗಿದ್ದು, ವಿಶೇಷವೆಂದರೆ ಆತನೂ ಆಗ ಅಪ್ರಾಪ್ತ ವಯಸ್ಕನಾಗಿದ್ದ ಕಾರಣ ಆತನ ಸ್ನೇಹಿತರ ಜೊತೆ ಬಂಧಿಸಿ ಬಾಲ ಮಂದಿರಕ್ಕೆ ರವಾನಿಸಲಾಗಿತ್ತು.

ಆರೋಪಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣ ಪುನಃ ವಿಚಾರಣೆಗೆ ಕೆಳ ನ್ಯಾಯಾಲಯಕ್ಕೇ ಬಂದಿತ್ತು. ತ್ವರಿತಗತಿ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆದು ಅವರುಗಳಿಗೆ ಈಗ ಶಿಕ್ಷೆ ವಿಧಿಸಲಾಗಿದೆ. ಶಿಕ್ಷೆಯ ಪ್ರಮಾಣವನ್ನು ಏಪ್ರಿಲ್ 16 ರಂದು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...