alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಮೂಹಿಕ ಅತ್ಯಾಚಾರ ಎಸಗಿ ಮೊಬೈಲ್ ನಲ್ಲಿ ಸೆರೆ

rape a 11

ಅಪ್ರಾಪ್ತ ವಯಸ್ಸಿನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ, ಅದನ್ನು ಮೊಬೈಲ್ ನಲ್ಲಿ ಸೆರೆ ಹಿಡಿದ ದುಷ್ಕರ್ಮಿಗಳನ್ನು, ಶಹಾಪುರ ಭೀಮರಾಯನಗುಡಿ ಠಾಣೆ ಪೊಲೀಸರು, ಬಂಧಿಸಿದ್ದಾರೆ. ಹೋಳಿ ಹುಣ್ಣಿಮೆ ಸಂದರ್ಭದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಶಹಾಪುರ ತಾಲ್ಲೂಕಿನ ಹುಲಕಲ್ ಗ್ರಾಮದಲ್ಲಿ 17 ವರ್ಷ ವಯಸ್ಸಿನ ಯುವತಿ ಮೇಲೆ ಅದೇ ಗ್ರಾಮದ ಸೋಮಣ್ಣ, ಶರಣಪ್ಪ, ಸಕ್ರಪ್ಪ, ಸಿದ್ಧಬಸವ ಎಂಬ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ. ಮಾರ್ಚ್ 24ರಂದು ಯುವತಿ ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ, ಸಾಮೂಹಿಕ ಅತ್ಯಾಚಾರ ಎಸಗಿ, ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದರು. ಇದರಿಂದ ಆತಂಕಕ್ಕೆ ಒಳಗಾದ ಆಕೆಯ ಕುಟುಂಬದವರು, ದೂರು ನೀಡಿರಲಿಲ್ಲ.

ಕೊನೆಗೆ ಯುವತಿಯ ಪೋಷಕರು ಏಪ್ರಿಲ್ 10ರಂದು ಶಹಾಪುರ ಭೀಮರಾಯನಗುಡಿ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರನ್ನು ನ್ಯಾಯಾಂಗ ಬಂಧನದಲ್ಲಿಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...