alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಮೂಹಿಕ ಅತ್ಯಾಚಾರ ಎಸಗಿ ಮೊಬೈಲ್ ನಲ್ಲಿ ಸೆರೆ

rape 11

ಹೈದರಾಬಾದ್: ಹೆಣ್ಣುಮಕ್ಕಳ ಮೇಲೆ ಕಾಮುಕರ ದೌರ್ಜನ್ಯ ಪ್ರಕರಣ ಇತ್ತೀಚೆಗೆ ಹೆಚ್ಚಾಗಿದ್ದು, ಮತ್ತೊಂದು ಹೀನ ಕೃತ್ಯ ವರದಿಯಾಗಿದೆ. ಅಪ್ರಾಪ್ತ ವಯಸ್ಸಿನ ಆದಿವಾಸಿ ಬಾಲಕಿ ಮೇಲೆ ಮೂವರು, ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ತೆಲಂಗಾಣದ ಆದಿಲಾಬಾದ್ ಜಿಲ್ಲೆಯಲ್ಲಿ ಆದಿವಾಸಿ ಸಮುದಾಯಕ್ಕೆ ಸೇರಿದ ಅಪ್ರಾಪ್ತೆ ಮೇಲೆ, ಕಾಮುಕರು ಅತ್ಯಾಚಾರ ಎಸಗಿದ್ದಲ್ಲದೇ, ಮೊಬೈಲ್ ನಲ್ಲಿ ದೃಶ್ಯ ಸೆರೆ ಹಿಡಿದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮುಂದಿನ ಕ್ರಮ ಜರುಗಿಸಿದ್ದಾರೆ. ಬಾಲಕಿ ಆಟೋದಲ್ಲಿ ಹೊರಟಿದ್ದ ಸಂದರ್ಭದಲ್ಲಿ ರಾಜು, ಸೈಯದ್ ಮತೀನ್, ರಂಜಿತ್ ಎಂಬುವವರು, ಆಟೋ ಚಾಲಕನ ಮೇಲೆ ಹಲ್ಲೆ ಮಾಡಿ, ಬಾಲಕಿಯನ್ನು ಅಪಹರಿಸಿ, ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ಹೇಳಲಾಗಿದೆ.

ಅಜ್ಞಾತ ಸ್ಥಳದಲ್ಲಿ ಬಾಲಕಿ ಮೇಲೆ, ಅತ್ಯಾಚಾರ ಎಸಗಿ ಮೊಬೈಲ್ ನಲ್ಲಿ ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ. ಅಲ್ಲದೇ, ಜೀವ ಬೆದರಿಕೆ ಹಾಕಿ ಕಳಿಸಿದ್ದಾರೆ ಎನ್ನಲಾಗಿದೆ. ಬಾಲಕಿ ಪೋಷಕರಿಗೆ ವಿಷಯ ತಿಳಿಸಿದ್ದು, ಅವರು ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...