alex Certify
ಕನ್ನಡ ದುನಿಯಾ       Mobile App
       

Kannada Duniya

ಗರ್ಭ ತೆಗೆಸಲು ಬಂದಾಗ ಬಯಲಾಯ್ತು ರಹಸ್ಯ

rape_sto 78ಹೆಣ್ಣುಮಕ್ಕಳ ಅಸಹಾಯಕತೆಯನ್ನು ವಂಚಕರು ಹೇಗೆಲ್ಲಾ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದಕ್ಕೆ ಇಲ್ಲಿದೆ ನೋಡಿ ಉದಾಹರಣೆ. ಮನೆ ಕೆಲಸಕ್ಕೆ ಬರುತ್ತಿದ್ದ ಯುವತಿಯ ಮೇಲೆ ಹಿರಿಯನೊಬ್ಬ ನಿರಂತರ ಅತ್ಯಾಚಾರ ಎಸಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

56 ವರ್ಷ ವಯಸ್ಸಿನ ವ್ಯಕ್ತಿಗೆ ಮೊದಲಿನಿಂದಲೂ ಹಗ್ಗ ಕಡಿಯುವ ಚಾಳಿ ಇತ್ತು. ಈತನ ಚಾಳಿಯಿಂದ ಬೇಸತ್ತ ಪತ್ನಿ ಇತ್ತೀಚೆಗಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪುಣ್ಯಾತ್ಮ ಮನೆ ಕೆಲಸಕ್ಕೆ ಬರುತ್ತಿದ್ದ 19 ವರ್ಷದ ಯುವತಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಇದರ ಫಲವಾಗಿ ಯುವತಿ 8 ತಿಂಗಳ ಗರ್ಭಿಣಿಯಾಗಿದ್ದಾಳೆ. ಆಕೆಯ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡ ದುರುಳ ಆಸೆ ತೀರಿದ ನಂತರ ಕೈಬಿಟ್ಟಿದ್ದಾನೆ. ಕೊನೆಗೆ ಆಕೆ ಬೇರೆ ದಾರಿ ಕಾಣದೆ ಗರ್ಭ ತೆಗೆಸಲು ಆಸ್ಪತ್ರೆಗೆ ಹೋಗಿದ್ದಾಳೆ ಎನ್ನಲಾಗಿದೆ.

ಅಲ್ಲಿ ವೈದ್ಯರು ಗರ್ಭಿಣಿಯಾಗಿ 8 ತಿಂಗಳಾಗಿದ್ದು, ಈಗ ಗರ್ಭ ತೆಗೆಯುವುದು ಸಾಧ್ಯವಿಲ್ಲ ಎಂದು ಕಳುಹಿಸಿದ್ದಾರೆ. ಕೊನೆಗೆ ಯುವತಿ ಮಂಗಳೂರಿನ ಬಜಪೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...