alex Certify
ಕನ್ನಡ ದುನಿಯಾ       Mobile App
       

Kannada Duniya

ಹೋಂ ವರ್ಕ್ ಮಾಡದ ಬಾಲಕಿಗೆ ‘ಅತ್ಯಾಚಾರದ ಶಿಕ್ಷೆ’

Minor-Raped-Killed

ಶಾಲೆಯಲ್ಲಿ ಹೋಂ ವರ್ಕ್ ಮಾಡಿಕೊಂಡು ಬಂದಿಲ್ಲವೆಂದರೆ ಮಕ್ಕಳನ್ನು ಹೊಡೆಯುವುದು, ಬಿಸಿಲಿನಲ್ಲಿ ನಿಲ್ಲಿಸುವುದು ಸಾಮಾನ್ಯ. ಆದರೆ ಇಲ್ಲೊಬ್ಬ ಕಾಮುಕ ಶಿಕ್ಷಕ ಹೋಂ ವರ್ಕ್ ಮಾಡಿಕೊಂಡು ಬಾರದ ಆರು ವರ್ಷದ ಬಾಲಕಿಯನ್ನು ಅತ್ಯಾಚಾರ ನಡೆಸುವ ಮೂಲಕ ತನ್ನ ಕ್ರೌರ್ಯ ಪ್ರದರ್ಶಿಸಿದ್ದಾನೆ.

ಮಧ್ಯಪ್ರದೇಶದ ಸಿಂಗರೌಲಿ ಜಿಲ್ಲೆಯ ಕುರ್ಸಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸತ್ಯನಾರಾಯಣ ವರ್ಮ ಎಂಬ ಕಾಮುಕ ಶಿಕ್ಷಕ ಶಾಲೆಯಲ್ಲಿ ಆರು ವರ್ಷದ ಬಾಲಕಿ ಹೋಂ ವರ್ಕ್ ಮಾಡಿಲ್ಲವೆಂದು ಆಕೆಯನ್ನು ಶಾಲೆಯ ಹಿಂಭಾಗಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದು, ಈ ವಿಚಾರವನ್ನು ಬಾಯ್ಬಿಟ್ಟರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಈ ಘಟನೆಯಿಂದ ಸಂತ್ರಸ್ಥ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕಾಮುಕ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...