alex Certify
ಕನ್ನಡ ದುನಿಯಾ       Mobile App
       

Kannada Duniya

ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ವಿದ್ಯಾರ್ಥಿಗಳು

Girl-gang-raped2960

ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲಿಯೇ ಅಪ್ರಾಪ್ತ ಶಾಲಾ ಬಾಲಕಿಯನ್ನು ಅದೇ ಶಾಲೆಯ ವಿದ್ಯಾರ್ಥಿಗಳು ಅಪಹರಿಸಿ ಒಂದು ವಾರಗಳ ಕಾಲ ನಿರಂತರವಾಗಿ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ಬಿಹಾರದಲ್ಲಿ ನಡೆದಿದೆ.

ಇಲ್ಲಿನ ಸಹರಸಾ ಥಾಣಾದಲ್ಲಿ ಈ ಘಟನೆ ನಡೆದಿದ್ದು, ಶಾಲಾ ಬಾಲಕಿಯೊಬ್ಬಳ ಮೇಲೆ ಕಣ್ಣಿಟ್ಟಿದ್ದ ಅದೇ ಶಾಲೆಯ ಐವರು ವಿದ್ಯಾರ್ಥಿಗಳು ಆಕೆ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಸಮಯದಲ್ಲಿ ಬಸ್ ನಿಲ್ದಾಣದಿಂದ ಆಕೆಯನ್ನು ಅಪಹರಿಸಿದ್ದಾರೆ.

ತದ ನಂತರ ಆಕೆಯನ್ನು ಚಿಕ್ಕದೊಂದು ಮನೆಯಲ್ಲಿ ಇರಿಸಿ, ವಾರಗಳ ಕಾಲ ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ. ಈ ಮನೆಯಲ್ಲಿ ನಡೆಯುತ್ತಿರುವ ಅನುಮಾನಾಸ್ಪದ ವರ್ತನೆಯಿಂದ ಅನುಮಾನಗೊಂಡ ಗ್ರಾಮಸ್ಥರು ಮನೆಗೆ ಬಂದಿದ್ದು, ಈ ಸಮಯದಲ್ಲಿ ಐವರೂ ಸಹ ಅಲ್ಲಿಂದ ಪರಾರಿಯಾಗಿದ್ದಾರೆ.

ಈಗಾಗಲೇ ಸಂತ್ರಸ್ತ ಬಾಲಕಿಯನ್ನು ಪೋಷಕರಿಗೆ ಒಪ್ಪಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾಮುಕ ವಿದ್ಯಾರ್ಥಿಗಳ ಪತ್ತೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...