alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಕ್ಲೇಟ್ ಕೊಡ್ತೀನಿ ಅಂದವನು ಮಾಡಿದ್ದೇನು..?

minor1

ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿದ್ದು, 40 ವರ್ಷದ ಕಾಮುಕನೊಬ್ಬ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಹೇಯ ಘಟನೆ ಆಂಧ್ರದಲ್ಲಿ ನಡೆದಿದೆ.

ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಚಾಕ್ಲೇಟ್ ಕೊಡಿಸುವ ನೆಪದಲ್ಲಿ ಆಸ್ಮಾ ಎಂಬ ಆರು ವರ್ಷದ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ ಓಬಯ್ಯ ಎಂಬ ಕಾಮುಕ ನಂತರ ಆಕೆಯನ್ನು ಕೊಲೆ ಮಾಡಿ ಆಕೆಯ ಶವವನ್ನು ಊರ ಹೊರಗಿನ ನಿರ್ಜನ ಪ್ರದೇಶದಲ್ಲಿ ಸುಟ್ಟು ಹಾಕಿದ್ದ.

ಆಸ್ಮಾ ನಾಪತ್ತೆಯಾಗಿದ್ದರ ಕುರಿತಾಗಿ ಪೋಷಕರು, ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದರು. ಈ ನಡುವೆ ಅತ್ಯಾಚಾರ ಆರೋಪಿ ಖುದ್ದಾಗಿ ಪೊಲೀಸರ ಮುಂದೆ ಶರಣಾಗಿದ್ದು, ಪೊಲೀಸರಿಗೆ ನಡೆದ ವಿಚಾರವನ್ನು ತಿಳಿಸಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...