alex Certify
ಕನ್ನಡ ದುನಿಯಾ       Mobile App
       

Kannada Duniya

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದವನಿಗೆ ಗ್ರಾಮಸ್ಥರ ಧರ್ಮದೇಟು

rape-raichuru-696x432

ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಕಾಮುಕನೊಬ್ಬನಿಗೆ ಗ್ರಾಮಸ್ಥರೇ ಧರ್ಮದೇಟು ನೀಡಿದ ಘಟನೆ ರಾಯಚೂರಿನ ಮಾನ್ವಿ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಗ್ರಾಮವೊಂದರಲ್ಲಿನ ಬಾಲಕಿ, ಕಿರಾಣಿ ಅಂಗಡಿಗೆ ತೆರಳಿದ್ದಳು. ಈ ಸಮಯದಲ್ಲಿ ಅದೇ ಗ್ರಾಮದವನಾದ ಆದಯ್ಯ ಎಂಬಾತ ಆಕೆಯನ್ನು ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಕಿರಾಣಿ ಅಂಗಡಿಗೆ ಹೋದ ಮಗಳು ತುಂಬಾ ಹೊತ್ತಾದರೂ ಮನೆಗೆ ಬಾರದ ಕಾರಣ ಆತಂಕಗೊಂಡ ಪೋಷಕರು ಮಗಳನ್ನು ಹುಡುಕಿಕೊಂಡು ಹೋದಾಗ ವಿಷಯ ತಿಳಿದುಬಂದಿದೆ.

ತಕ್ಷಣ ಆಕ್ರೋಶಗೊಂಡ ಗ್ರಾಮಸ್ಥರು, ಕಾಮುಕನಿಗೆ ಚಪ್ಪಲಿ ಹಾರ ಹಾಕಿ ಮನಬಂದಂತೆ ಥಳಿಸಿ ಕವಿತಾಳ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ವಿಚಾರಣೆ ನಡೆಸುತ್ತಿದ್ದು, ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...