alex Certify
ಕನ್ನಡ ದುನಿಯಾ       Mobile App
       

Kannada Duniya

ಜಾತ್ರೆಗೆ ಬಂದ ಮಹಿಳೆ ಮೇಲೆ ಗ್ಯಾಂಗ್ ರೇಪ್

gang

ದಾವಣಗೆರೆ: ಜಾತ್ರೆಗೆ ಬಂದಿದ್ದ ಮಹಿಳೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹರಪನಹಳ್ಳಿ ತಾಲ್ಲೂಕಿನ ಕೂಲಹಳ್ಳಿ ಗ್ರಾಮದಲ್ಲಿ ನಡೆದಿದೆ. 28 ವರ್ಷದ ಮಹಿಳೆ ಇಲ್ಲಿನ ದೇವರ ಉತ್ಸವಕ್ಕೆ ಬಂದ ಸಂದರ್ಭದಲ್ಲಿ ಘಟನೆ ನಡೆದಿದೆ.

ರಥೋತ್ಸವ ಮುಗಿದ ನಂತರ ಮಹಿಳೆ ಸಮೀಪದಲ್ಲಿ ಹಾಕಿದ್ದ ನಾಟಕದ ಟೆಂಟ್ ಸಮೀಪ ಪರಿಚಯಸ್ಥರೊಂದಿಗೆ ನಿಂತಿದ್ದರು. ಈ ಸಂದರ್ಭದಲ್ಲಿ ಆಕೆಯನ್ನು ಅಪಹರಿಸಿದ ದುಷ್ಕರ್ಮಿಗಳು, ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿದ್ದು, ಅವರನ್ನು ಬಂಧಿಸಲಾಗಿದೆ. ಶನಿವಾರ ರಾತ್ರಿ ನಾಟಕ ನಡೆಯುತ್ತಿದ್ದ ಸ್ಥಳದಿಂದ ಅಪಹರಿಸಿ ಅತ್ಯಾಚಾರ ಎಸಗಿರುವುದಾಗಿ ಮಹಿಳೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತಿರುಪತಿ, ಹನುಮಂತಪ್ಪ, ಬಸವರಾಜ, ದ್ಯಾಮ ಹಾಗೂ ಬಸವರಾಜ ಎಂಬುವವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ. ಜಾತ್ರೆಗೆ ಬಂದಿದ್ದ ಸಂದರ್ಭದಲ್ಲಿ ಘಟನೆ ನಡೆದಿರುವುದು ಆತಂಕ ಮೂಡಿಸಿದೆ

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...