alex Certify
ಕನ್ನಡ ದುನಿಯಾ       Mobile App
       

Kannada Duniya

ಜಮೀನಿಗೆ ತೆರಳಿದ್ದ ಒಂಟಿ ಮಹಿಳೆ, ಆಗಿದ್ದೇನು..?

Rape koppal

ಕೊಪ್ಪಳ: ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣ ಇತ್ತೀಚೆಗೆ ಹೆಚ್ಚಾಗಿವೆ. ಒಂಟಿ ಮಹಿಳೆ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕಿನ ಕುಕನೂರು ಸಮೀಪದಲ್ಲಿ ಜಮೀನಿಗೆ ಹೋಗಿದ್ದ ಮಹಿಳೆಯನ್ನು ಕಿರಾತಕನೊಬ್ಬ ಸಮೀಪದ ಮೆಕ್ಕೆ ಜೋಳದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದರಿಂದ ಗಾಬರಿ ಬಿದ್ದ ಮಹಿಳೆ ಕಿರುಚಾಡಿದ್ದಾಳೆ. ಮಹಿಳೆಯ ಕಿರುಚಾಟ ಕೇಳಿದ ಅಕ್ಕಪಕ್ಕದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರು, ಧಾವಿಸಿ ಬಂದು ಮಹಿಳೆಯನ್ನು ರಕ್ಷಿಸಿದ್ದಾರೆ. ಹಂಚ್ಯಾಳಪ್ಪ ಎಂಬ ವ್ಯಕ್ತಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯಾಗಿದ್ದಾನೆ ಎನ್ನಲಾಗಿದೆ.

ಈತ, ಮಹಿಳೆ ಒಂಟಿಯಾಗಿ ಜಮೀನಿಗೆ ಹೋಗುವುದನ್ನು ಗಮನಿಸಿ, ಹಿಂಬಾಲಿಸಿಕೊಂಡು ಬಂದಿದ್ದಾನೆ. ಆಕೆಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಕುಕುನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...