alex Certify
ಕನ್ನಡ ದುನಿಯಾ       Mobile App
       

Kannada Duniya

ಅಣ್ಣನ ಮಗಳ ಮೇಲೆಯೇ ಅಮಾನವೀಯ ಕೃತ್ಯ

balaki rape malur

ಕೆಲ ಹೆಣ್ಣುಮಕ್ಕಳ ಪಾಲಿಗೆ ಮನೆಯೂ ಸೇಫ್ ಅಲ್ಲ ಎಂಬುದು ಇತ್ತೀಚಿನ ಹಲವು ಘಟನೆಗಳಿಂದ ಗೊತ್ತಾಗಿದೆ. ಈ ಸಾಲಿಗೆ ಮತ್ತೊಂದು ಪ್ರಕರಣ ಸೇರಿದೆ ನೋಡಿ. ಬಾಲಕಿಯೊಬ್ಬಳ ಮೇಲೆ ಚಿಕ್ಕಪ್ಪನೇ ಅತ್ಯಾಚಾರ ಎಸಗಿರುವ ಘಟನೆ ಮಾಲೂರು ತಾಲ್ಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ಕೊರಂಡಹಳ್ಳಿಯಲ್ಲಿ ವಿಕೃತಕಾಮಿಯೊಬ್ಬ ತನ್ನ ಹಿರಿಯ ಸಹೋದರನ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. ಟ್ರ್ಯಾಕ್ಟರ್ ಚಾಲಕನಾಗಿರುವ 35 ವರ್ಷದ ದುರುಳ ಟಿವಿ ನೋಡಿ ಮನೆಗೆ ಹೋಗುತ್ತಿದ್ದ ಬಾಲಕಿಯನ್ನು ಎಳೆದುಕೊಂಡು ಹೋಗಿ ದೌರ್ಜನ್ಯ ಎಸಗಿದ್ದಾನೆ. ಬಾಲಕಿಯ ಮನೆಯಲ್ಲಿ ಟಿವಿ ಇಲ್ಲದ ಕಾರಣ, ಸಮೀಪದಲ್ಲಿಯೇ ಇದ್ದ ಮತ್ತೊಬ್ಬ ಚಿಕ್ಕಪ್ಪನ ಮನೆಗೆ ಹೋಗಿದ್ದಳು. ಅಲ್ಲಿ ಟಿವಿ ನೋಡಿಕೊಂಡು ರಾತ್ರಿ ಮನೆಗೆ ವಾಪಸ್ ಬರುತ್ತಿದ್ದಳು.

ಆಗ ಕತ್ತಲಲ್ಲಿ ಬಾಲಕಿ ಒಬ್ಬಳೇ ಬರುವುದನ್ನು ಕಂಡ ದುರುಳ ಎತ್ತಿಕೊಂಡು ಹೋಗಿ ದೌರ್ಜನ್ಯ ಎಸಗಿದ್ದಾನೆ. ಮೊದಲಿಗೆ ದೂರು ದಾಖಲಿಸಿಕೊಳ್ಳದಂತೆ ಪೊಲೀಸರ ಮೇಲೆ ಒತ್ತಡ ಹೇರಲಾಗಿದ್ದು, ಬಳಿಕ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...