alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿಯ ಮೇಲೆ ಆಸ್ಪತ್ರೆಯಲ್ಲಿಯೂ ನಡೆಯಿತು ರೇಪ್ !

rape-generic-image_650x400_71440935788

ಅತ್ಯಾಚಾರಕ್ಕೆ ಒಳಗಾಗಿ ಆಸ್ಪತ್ರೆ ಸೇರಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಆಸ್ಪತ್ರೆಯ ಸಿಬ್ಬಂದಿಯೇ ಮತ್ತೆ ಅತ್ಯಾಚಾರ ನಡೆಸಿದ ಹೇಯ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ.

ಜೆಮ್ ಶೆಡ್ ಪುರದ ಪರ್ಸುದಿಹ್ ಎಂಬ ಪ್ರದೇಶದಲ್ಲಿ ಕೆಲವು ದಿನಗಳ ಹಿಂದೆ 15 ರ ಹರೆಯದ ಬಾಲಕಿ ಮೇಲೆ ಕಾಮುಕ ಬಾಲಕನೊಬ್ಬ ಅತ್ಯಾಚಾರ ನಡೆಸಿದ್ದ. ಈ ಘಟನೆಯಿಂದ ದೈಹಿಕ ಆಘಾತಕ್ಕೀಡಾಗಿದ್ದ ಬಾಲಕಿ ಇಲ್ಲಿನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದಳು. ಈ ಸಮಯದಲ್ಲಿ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್‍ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.

ಈಗಾಗಲೇ ಮೊದಲು ಅತ್ಯಾಚಾರವೆಸಗಿದ ಬಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ಆಸ್ಪತ್ರೆಯಲ್ಲಿ ಅತ್ಯಾಚಾರವೆಸಗಿದ ಕಾಮುಕನ ಪತ್ತೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...