alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲೆಯಲ್ಲೇ ದೈಹಿಕ ಶಿಕ್ಷಕನಿಂದ ನಿರಂತರ ಅತ್ಯಾಚಾರ

balaki rape 60

ಅತ್ಯಾಚಾರ ಪ್ರಕರಣ ದಿನಕ್ಕೊಂದರಂತೆ ವರದಿಯಾಗುತ್ತಿದ್ದು, ಹೆಣ್ಣುಮಕ್ಕಳನ್ನು ಹೊರಗೆ ಕಳುಹಿಸಲು ಹಿಂದೆ ಮುಂದೆ ನೋಡುವಂತಾಗಿದೆ. ಶಾಲೆಯಲ್ಲೇ ದೈಹಿಕ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನಾಗಿರುವ ಲಕ್ಷ್ಮಿಕಾಂತ್ ಎಂಬಾತ ಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ, ಬಾಲಕಿಗೆ ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಕೂಡ ಹಾಕಿದ್ದಾನೆ. ಲಕ್ಷ್ಮಿಕಾಂತ್ ವಿದ್ಯಾರ್ಥಿನಿ ಮೇಲೆ 2015ರ ಜೂನ್ ನಿಂದ ನವೆಂಬರ್ ವರೆಗೆ ಅತ್ಯಾಚಾರ ಎಸಗಿದ್ದು, ಶಾಲೆಯ ಆಡಳಿತ ಮಂಡಳಿಯಿಂದಲೇ ಪೊಲೀಸರಿಗೆ ದೂರು ನೀಡಲಾಗಿದೆ.

ತಡವಾಗಿ ಅಂದರೆ, ನಿನ್ನೆ ಶಾಲೆಯ ಆಡಳಿತ ಮಂಡಳಿಯವರು ಜಾಲಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿ ಲಕ್ಷ್ಮಿಕಾಂತ್ ಪತ್ತೆಗೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...