alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರ ನಡೆಸಲು ವಿಫಲರಾದ ದುಷ್ಕರ್ಮಿಗಳು ಮಾಡಿದ್ರು ಈ ಕೆಲಸ

ಬಿಹಾರದ ಸಾರನ್ ನಲ್ಲಿ ನಡೆದ ಅಪ್ರಾಪ್ತ ಬಾಲಕಿ ಹತ್ಯೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಖೈರನಾಪುರ್ ನಲ್ಲಿ ನಡೆದ ಪ್ರಕರಣವನ್ನು ಪೊಲೀಸರು 72 ಗಂಟೆಯೊಳಗೆ ಬೇಧಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೋಳಿ ಫಾರ್ಮ್ ನ ಮಾಲೀಕ ಬಿನೋದ್ ಸಿಂಗ್ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಅಪ್ರಾಪ್ತ ಬಾಲಕಿ ಸ್ಕೂಲ್ ಬ್ಯಾಗ್ ಕೂಡ ಕೋಳಿ ಫಾರ್ಮ್ ನಲ್ಲಿ ಸಿಕ್ಕಿದೆ.

ವಿದ್ಯಾರ್ಥಿನಿಯನ್ನು ಅಪಹರಿಸಿ ಕೋಳಿ ಫಾರ್ಮ್ ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಈ ವೇಳೆ ಬಾಲಕಿ ಕೂಗಿಕೊಂಡಿದ್ದರಿಂದ ಆಕೆ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ನಂತ್ರ ಶವವನ್ನು ಚೀಲದಲ್ಲಿ ತುಂಬಿ ಎಸೆದಿದ್ದಾರೆ.

ಘಟನೆ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ. ಪ್ರಕರಣದ ಬಗ್ಗೆ ತ್ವರಿತವಾಗಿ ವಿಚಾರಣೆ ನಡೆಯಲಿದೆ ಎಂದು ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...