alex Certify
ಕನ್ನಡ ದುನಿಯಾ       Mobile App
       

Kannada Duniya

ಲಷ್ಕರ್-ಎ-ತೊಯ್ಬಾದ ಕಮಾಂಡರ್ ಅರೆಸ್ಟ್

456779-letcommandersaudi

ಇತ್ತೀಚೆಗೆ ದೇಶದಲ್ಲಿ ಶಂಕಿತ ಉಗ್ರರನ್ನು ವಶಕ್ಕೆ ಪಡೆಯುತ್ತಿರುವ ಘಟನೆ ಹೆಚ್ಚುತ್ತಿದ್ದು, ಈ ನಡುವೆಯೇ ಉತ್ತರ ಪ್ರದೇಶ ಭಯೋತ್ಪಾದಕ ನಿಗ್ರಹ ದಳ ಹಾಗೂ ತೆಲಂಗಾಣ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಅಬ್ದುಲ್ ಅಜೀಜ್​ ನನ್ನು ವಶಕ್ಕೆ ಪಡೆದಿರುವ ಮಾಹಿತಿ ಲಭ್ಯವಾಗಿದೆ.

ಹಲವು ಪ್ರಕರಣಗಳಿಗೆ ಬೇಕಾಗಿದ್ದ ಅಜೀಜ್, ಸೌದಿ ಅರೇಬಿಯಾದಲ್ಲಿ ಜೈಲು ವಾಸಿಯಾಗಿದ್ದ. ಇದೀಗ ಅಲ್ಲಿಂದ ಆತನನ್ನು ಗಡಿಪಾರು ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಆತ ನಿನ್ನೆ ರಾತ್ರಿ ಭಾರತಕ್ಕೆ ಬಂದಿಳಿದಿದ್ದ. ಈ ಕುರಿತು ಅಧಿಕೃತ ಮಾಹಿತಿ ಪಡೆದಿದ್ದ ಭಯೋತ್ಪಾದಕ ನಿಗ್ರಹ ದಳ ಹಾಗೂ ತೆಲಂಗಾಣ ಪೊಲೀಸರು ಕಾರ್ಯಾಚರಣೆ ನಡೆಸಿ ಲಖನೌ ವಿಮಾನ ನಿಲ್ದಾಣದಲ್ಲಿ ಆತನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ವಿಶೇಷವೆಂದರೆ ಗಣರಾಜ್ಯೋತ್ಸವದ ಸಮಯದಲ್ಲಿ ಭಾರತದಾದ್ಯಂತ ಸ್ಪೋಟಕ್ಕೆ ಸಂಚು ರೂಪಿಸಿದ್ದ 14 ಐಸಿಸ್ ಹಾಗೂ ಲಷ್ಕರ್ ಉಗ್ರರಲ್ಲಿ 13 ಜನರನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಇದೀಗ ಉಗ್ರ ಸಂಘಟನೆಯ ಕಮಾಂಡರ್ ಅಜೀಜ್ ಸೆರೆ ಸಿಕ್ಕಿದ್ದು, ಉಗ್ರರ ನಿಗ್ರಹಕ್ಕೆ ಮತ್ತಷ್ಟು ಅನುಕೂಲವಾಗಲಿದೆ ಎನ್ನಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...