alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿ ಅಪಹರಿಸಿ ಅತ್ಯಾಚಾರವೆಸಗಿದ ಅಪ್ರಾಪ್ತ

ನಾಲ್ಕ ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದ ಹುಡುಗಿಯನ್ನು ಪೊಲೀಸರು ರಕ್ಷಿಸಿದ್ದಾರೆ. ನೋಯ್ಡಾದಲ್ಲಿ ಹುಡುಗಿ ಸಹಪಾಠಿಯೇ ಅಪಹರಣ ಮಾಡಿ, ಅತ್ಯಾಚಾರವೆಸಗಿದ್ದ. ಅಪ್ರಾಪ್ತ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ನಡೆದಿರುವುದು ನೋಯ್ಡಾದ ಸೂರಜ್ಪುರದಲ್ಲಿ. ಇಲ್ಲಿನ ಕಾಲೇಜೊಂದರಲ್ಲಿ ಓದುತ್ತಿದ್ದ 11ನೇ ತರಗತಿ ವಿದ್ಯಾರ್ಥಿನಿ ನಾಲ್ಕು ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದಳು. ಈ ಸಂಬಂಧ ವಿದ್ಯಾರ್ಥಿನಿ ತಂದೆ ಮೂವರ ವಿರುದ್ಧ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿ ಬಗ್ಗೆ ಸುಳಿವು ಸಿಕ್ಕಿದೆ.

ಸೂಕ್ತ ಮಾಹಿತಿ ಮೇರೆಗೆ ಅಪಹರಣಕ್ಕೊಳಗಾದ ವಿದ್ಯಾರ್ಥಿನಿಯನ್ನು ಪೊಲೀಸರು ರಕ್ಷಿಸಿದ್ದಾರೆ. ವಿದ್ಯಾರ್ಥಿನಿ ದೂರಿನ ಮೇರೆಗೆ ಸಹಪಾಠಿಯನ್ನು ಬಂಧಿಸಿದ್ದಾರೆ. ಆತ ಕೂಡ ಅಪ್ರಾಪ್ತನಾಗಿದ್ದು ವಿದ್ಯಾರ್ಥಿನಿ ಅಪಹರಿಸಿ ಅತ್ಯಾಚಾರವೆಸಗಿರುವುದನ್ನು ಒಪ್ಪಿಕೊಂಡಿದ್ದಾನೆ. ಕೋರ್ಟ್ ಮುಂದೆ ವಿದ್ಯಾರ್ಥಿಯನ್ನು ಹಾಜರುಪಡಿಸಲಾಗಿದ್ದು, ರಿಮಾಂಡ್ ರೂಮಿಗೆ ಕಳುಹಿಸಲಾಗಿದೆ. ವಿದ್ಯಾರ್ಥಿನಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ಮನೆಗೆ ಕಳುಹಿಸಲಾಗಿದೆ. ಪೊಲೀಸ್ ಇಲಾಖೆ ವಿಚಾರಣೆ ಮುಂದುವರೆಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...