alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಕಿ ಹೇಳಿದ್ದನ್ನು ಕೇಳಿ ಬೆಚ್ಚಿಬಿದ್ದ ಪೋಷಕರು

ಶಿವಮೊಗ್ಗ: ಮನೆಯಲ್ಲಿದ್ದ ಬಾಲಕಿ ಮೇಲೆ ಕಾಮುಕ ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜೋಸೆಫ್ ಡಿಕಾಸ್ಟ(54) ಬಂಧಿತ ಆರೋಪಿ. ಬಡ ಕುಟುಂಬದ ಬಾಲಕಿಗೆ ಶಿಕ್ಷಣ ಕೊಡಿಸುವುದಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪಿ ಅತ್ಯಾಚಾರ ಎಸಗಿದ್ದಾನೆ.

ಆರೋಪಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಪತ್ನಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಇತ್ತೀಚೆಗೆ ವಾಪಸ್ ಬಂದಿದ್ದಾರೆ. ನಂತರದಲ್ಲಿ ಬಾಲಕಿ ಪೋಷಕರ ಬಳಿಗೆ ಹೋಗಿದ್ದಾಳೆ. ಆಕೆ ಖಿನ್ನತೆಯಿಂದ ಬಳಲುತ್ತಿದ್ದ ಕಾರಣ, ಪೋಷಕರು ವಿಚಾರಿಸಿದಾಗ, ಅತ್ಯಾಚಾರದ ವಿಷಯ ಬೆಳಕಿಗೆ ಬಂದಿದೆ.

ಪೋಷಕರು ಎಸ್.ಪಿ.ಯವರಿಗೆ ವಿಷಯ ತಿಳಿಸಿದ್ದು, ರಿಪ್ಪನ್ ಪೇಟೆ ಪೊಲೀಸರು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...