alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ಸರ್ಜರಿ ವೇಳೆ ವೈದ್ಯನಿಂದ ಲೈಂಗಿಕ ದೌರ್ಜನ್ಯ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿದೆ. ಹೃದಯ ಶಸ್ತ್ರ ಚಿಕಿತ್ಸೆ ವೇಳೆ ತನ್ನ ಮೇಲೆ ವೈದ್ಯರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಅಂತ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಗೋವಿಂದ್ ಬಲಾದ್ ಪಂಥ್ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ನಲ್ಲಿ ಈ ಘಟನೆ ನಡೆದಿದೆ ಅಂತ 45 ವರ್ಷದ ಮಹಿಳೆಯೊಬ್ಬರು ದೂರು ನೀಡಿದ್ದಾರೆ.

ಈ ಸಂಬಂಧ ಪೊಲೀಸರು ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ. ಉಸಿರಾಟದ ಸಮಸ್ಯೆ ಅಂತ ದಾಖಲಾಗಿದ್ದ ಮಹಿಳೆಗೆ ಹೃದಯ ಸಮಸ್ಯೆ ಇದೆ ಅನ್ನೋದನ್ನು ವೈದ್ಯರು ಪತ್ತೆ ಹಚ್ಚಿ ಆಪರೇಷನ್ಗೆ ಸೂಚಿಸಿದ್ದರಂತೆ. ಆ ಪ್ರಕಾರ ಸೆಪ್ಟೆಂಬರ್ 12ರಂದು ಆಕೆಗೆ ಆಪರೇಷನ್ ನಡೆಸಲಾಗಿದೆ. ಆಪರೇಷನ್ ನಂತರದಲ್ಲಿ ಆಕೆಗೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಅನ್ನೋದು ಗೊತ್ತಾಗಿದೆ.

ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಮಹಿಳೆ ವೈದ್ಯರನ್ನು ಅಳುತ್ತಾ ಪ್ರಶ್ನೆ ಮಾಡುತ್ತಿರುವ ವಿಡಿಯೋವನ್ನು ಚಿತ್ರೀಕರಿಸಿಕೊಂಡಿದ್ದು ಈಗ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪ್ರಕರಣದ ಬಗ್ಗೆ ಪೊಲೀಸರು ಈಗಾಗ್ಲೇ ಪ್ರಕರಣವನ್ನು ದಾಖಲಿಸಿಕೊಂಡಿದ್ದು ವಿಚಾರಣೆ ಆರಂಭಿಸಿದ್ದಾರೆ. ಅಲ್ಲದೇ ಮಹಿಳೆಯ ಕುಟಂಬಸ್ಥರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಗೆ ಪತ್ರವನ್ನು ಬರೆದು ಪ್ರಕರಣದ ಬಗ್ಗೆ ಗಮನ ಸೆಳೆದಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...