alex Certify
ಕನ್ನಡ ದುನಿಯಾ       Mobile App
       

Kannada Duniya

ಸಾವಿಗೆ ಕಾರಣವಾಯ್ತು ಕಾಪಿ ಚೀಟಿ ಕಲಹ

Murder a 13

ಪರೀಕ್ಷೆಗೂ ಮೊದಲೇ ಪ್ರಶ್ನೆ ಪತ್ರಿಕೆ ಬಹಿರಂಗವಾಗಿ ರಾಜ್ಯದಲ್ಲಿ ಏನೇನಾಗಿದೆ ಎಂಬುದು ನಿಮಗೆ ಗೊತ್ತೇ ಇದೆ. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕಾಪಿ ಚೀಟಿ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ.

ಈ ಘರ್ಷಣೆಯಲ್ಲಿ ಒಬ್ಬರು ಸಾವು ಕಂಡಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ರಾಜ್ಯಾದ್ಯಂತ ಬುಧವಾರ ಎಸ್.ಎಸ್.ಎಲ್.ಸಿ. ಭಾಷಾ ವಿಷಯದ ಪರೀಕ್ಷೆ ನಡೆದಿದೆ. ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ನಿಂಬಾಳ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು, ಪರೀಕ್ಷೆ ಬರೆಯುವ ಸಂದರ್ಭದಲ್ಲಿ ನಕಲು ಮಾಡಲು ಹೊರಗಿನಿಂದ ಚೀಟಿ ಕೊಡಲು ಕೆಲವರು ಬಂದಿದ್ದರು. ಈ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಕಾಪಿ ಚೀಟಿ ಕೊಡುವ ವಿಚಾರಕ್ಕೆ ಮಾತಿಗೆ ಮಾತು ನಡೆದು ಜಗಳ ಆರಂಭವಾಗಿದೆ.

ಜಗಳ ವಿಕೋಪಕ್ಕೆ ತಿರುಗಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ನಿಂಗಪ್ಪ ಪುಟಾಣಿ ಎಂಬಾತ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಹನುಮಂತಪ್ಪ ಪುಟಾಣಿ ಹಾಗೂ ಗಂಭೀರವಾಗಿ ಗಾಯಗೊಂಡಿರುವ ಮಂಜುನಾಥ್ ಎಂಬುವವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...