alex Certify
ಕನ್ನಡ ದುನಿಯಾ       Mobile App
       

Kannada Duniya

ಕಣ್ಣೆದುರಲ್ಲೇ ನಡೆದ ಘಟನೆ ಕಂಡು ಬೆಚ್ಚಿಬಿದ್ದ ಜನ

ಹೈದರಾಬಾದ್: ಪ್ರೀತಿಸಲು ನಿರಾಕರಿಸಿದ ಯುವತಿಗೆ ನಡುರಸ್ತೆಯಲ್ಲೇ ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ತೆಲಂಗಾಣದ ಲಾಲ್ ಗುಡಾದಲ್ಲಿ ನಡೆದಿದೆ.

ಗಂಭೀರವಾಗಿ ಗಾಯಗೊಂಡಿರುವ 25 ವರ್ಷದ ಯುವತಿ ಸಂಧ್ಯಾರಾಣಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕಣ್ಣೆದುರಲ್ಲೇ ನಡೆದ ಈ ಘಟನೆಯಿಂದಾಗಿ ಜನ ಬೆಚ್ಚಿಬಿದ್ದಿದ್ದಾರೆ.

ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂಧ್ಯಾರಾಣಿಯನ್ನು ಯುವಕ ಏಕಪಕ್ಷೀಯವಾಗಿ ಪ್ರೀತಿಸಿದ್ದು, ಆತನಿಗೆ ಸಂಧ್ಯಾ ಸ್ಪಂದಿಸಿರಲಿಲ್ಲ. ಹೈದರಾಬಾದ್ ನ ಲಾಲ್ ಗುಡಾ ಏರಿಯಾದಲ್ಲಿ ಗುರುವಾರ ಸಂಜೆ ಆಕೆಯನ್ನು ಅಡ್ಡಗಟ್ಟಿದ ಯುವಕ ಈ ಕೃತ್ಯವೆಸಗಿದ್ದಾನೆ.

ಸೀಮೆಎಣ್ಣೆ ಸುರಿದು ಯುವತಿಗೆ ಬೆಂಕಿ ಹಚ್ಚಿದ್ದು, ಆಕೆಯ ಕಿರುಚಾಟ ಕೇಳಿದ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು, ತೀವ್ರ ಸುಟ್ಟ ಗಾಯಗಳಾಗಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಾಪತ್ತೆಯಾಗಿರುವ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ಸಂಧ್ಯಾರಾಣಿಗೆ ಪರಿಚಿತನೇ ಆಗಿದ್ದ ಕಾರ್ತಿಕ್ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...