alex Certify
ಕನ್ನಡ ದುನಿಯಾ       Mobile App
       

Kannada Duniya

ಶೌಚಾಲಯದಲ್ಲಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಸೀನಿಯರ್ಸ್

ದೆಹಲಿ ಸಮೀಪದ ನೋಯ್ಡಾದ ಪ್ರಸಿದ್ಧ ಶಾಲೆಯಲ್ಲಿ ನಾಚಿಕೆಗೇಡಿ ಕೆಲಸ ನಡೆದಿದೆ. ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯನ್ನು ಶೌಚಾಲಯಕ್ಕೆ ಕರೆದೊಯ್ದ ಹಿರಿಯ ವಿದ್ಯಾರ್ಥಿಗಳು ಕಿರುಕುಳ ನೀಡಿದ್ದಾರೆ.

ಘಟನೆ ನೋಯ್ಡಾದ ಸೆಕ್ಟರ್ ಝೀಟಾ-1ರಲ್ಲಿ ನಡೆದಿದೆ. ಇಲ್ಲಿನ ಪ್ರಸಿದ್ಧ ಶಾಲೆಯೊಂದರ 8ನೇ ತರಗತಿ ವಿದ್ಯಾರ್ಥಿಗೆ 12ನೇ ತರಗತಿ ವಿದ್ಯಾರ್ಥಿಗಳು ಕಿರುಕುಳ ನೀಡಿದ್ದಾರೆ. ಇಬ್ಬರು ಆರೋಪಿ ವಿದ್ಯಾರ್ಥಿಗಳು 8ನೇ ತರಗತಿ ವಿದ್ಯಾರ್ಥಿಯನ್ನು ಶೌಚಾಲಯಕ್ಕೆ ಕರೆದೊಯ್ದು ಕಿರುಕುಳ ನೀಡಿದ್ದಾರೆ. ಖಾಸಗಿ ಅಂಗ ಮುಟ್ಟಿ ಹಿಂಸಿಸಿದ್ದಾರೆ.ಇದನ್ನು ವಿರೋಧಿಸಿದ ಪೀಡಿತ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದಾರೆ.

ವಿದ್ಯಾರ್ಥಿ ಮನೆಗೆ ಬಂದು ಪಾಲಕರಿಗೆ ವಿಷ್ಯ ತಿಳಿಸಿದ್ದಾನೆ. ಪಾಲಕರು ಶಾಲೆ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿದ್ದಾರೆ. ಪೊಲೀಸ್ ಠಾಣೆಗೆ ದೂರು ನೀಡಲು ನಿರಾಕರಿಸಿದ ಶಾಲೆ ಆಡಳಿತ ಮಂಡಳಿ,ಆರೋಪಿ ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ. ಘಟನೆ ನಂತ್ರ ಪೀಡಿತ ವಿದ್ಯಾರ್ಥಿ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಯತ್ನಿಸಿದ್ದಾರೆ. ಆದ್ರೆ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...