alex Certify
ಕನ್ನಡ ದುನಿಯಾ       Mobile App
       

Kannada Duniya

ಹತ್ತನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಲು ಕಾರಣವಾದ್ರು ಅಪ್ರಾಪ್ತರು

ಖಾಸಗಿ ವಸತಿ ಶಾಲೆಯಲ್ಲಿ ಮಕ್ಕಳು ಸುರಕ್ಷಿತವಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗ್ತಿದೆ. ವಸತಿ ಶಾಲೆಯಲ್ಲಿ ಅತ್ಯಾಚಾರ ಪ್ರಕರಣ ಹೆಚ್ಚಾಗ್ತಿದೆ. ಡೆಹ್ರಾಡೂನ್ ಸಹಸ್ಪುರ್ ನ ವಸತಿ ಶಾಲೆ ಆವರಣದಲ್ಲಿ ನಾಲ್ವರು ವಿದ್ಯಾರ್ಥಿಗಳು ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ವಿದ್ಯಾರ್ಥಿಗಳು, ಆಯಾ, ಶಾಲಾ ಸಿಬ್ಬಂದಿ ಸೇರಿದಂತೆ 9 ಮಂದಿಯನ್ನು ಬಂಧಿಸಿದ್ದಾರೆ. 10ನೇ ಹಾಗೂ 12ನೇ ತರಗತಿಯಲ್ಲಿ ಓದುತ್ತಿರುವ ಆರೋಪಿಗಳು ಕೂಡ ಅಪ್ರಾಪ್ತರು. ಬೋರ್ಡಿಂಗ್ ಶಾಲೆಯಲ್ಲಿ ಓದುತ್ತಿರುವ ಹತ್ತನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾದ ಮೇಲೆ ವಿಷ್ಯ ಹೊರಬಿದ್ದಿದೆ.

ಪೀಡಿತೆ ಸಹೋದರಿ ಬೋರ್ಡಿಂಗ್ ಸ್ಕೂಲಿನಲ್ಲಿಯೇ ಓದುತ್ತಿದ್ದು, ಆಕೆ ಮಾಹಿತಿ ಮೇರೆಗೆ ದೂರು ದಾಖಲಿಸಲಾಗಿದೆ. ವಿದ್ಯಾರ್ಥಿನಿ ಬಾಯಿ ಮುಚ್ಚಿಸುವ ಪ್ರಯತ್ನ ಕೂಡ ನಡೆದಿದೆ. ಒಂದುವರೆ ತಿಂಗಳ ಹಿಂದೆ ಘಟನೆ ನಡೆದಿದೆ ಎಂದು ಪೀಡಿತೆ ಹೇಳಿದ್ದಾಳೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...