alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿಗೆ ಮತ್ತು ಬರಿಸುವ ಪಾನೀಯ ಕುಡಿಸಿ ಹೀನ ಕೃತ್ಯ

rape-sms

ಶಿವಮೊಗ್ಗ: ವಿದ್ಯಾರ್ಥಿನಿಗೆ ಮತ್ತು ಬರುವ ಪಾನೀಯ ಕುಡಿಸಿ, ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಕಾಮುಕನೊಬ್ಬ ಪರಿಚಯವಿದ್ದ ಯುವತಿಯನ್ನು ಡ್ರಾಪ್ ಮಾಡುವುದಾಗಿ ಕಾರಿನಲ್ಲಿ ಕರೆದೊಯ್ದು, ಮತ್ತು ಬರುವ ಪಾನೀಯ ಕುಡಿಸಿ ಕಾರಿನಲ್ಲೇ ಅತ್ಯಾಚಾರ ಎಸಗಿದ್ದಾನೆ.

ಅದನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು, ಬ್ಲಾಕ್ ಮೇಲ್ ಮಾಡುತ್ತಿದ್ದ ಕಾಮುಕ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬಹಿರಂಗಪಡಿಸುವುದಾಗಿ ಬೆದರಿಸಿದ್ದಾನೆ.

ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಮುಂದಾಗಿ ಡೆತ್ ನೋಟ್ ಬರೆದಿದ್ದಾಳೆ. ಡೆತ್ ನೋಟ್ ಮನೆಯವರಿಗೆ ಸಿಕ್ಕಿದ್ದು, ವಿಷಯ ಬೆಳಕಿಗೆ ಬಂದಿದೆ. ಪೋಷಕರು ಸಂಘಟನೆಯೊಂದರ ನೆರವಿನಿಂದ ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಯುವಕ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

Subscribe Newsletter

Email *

Get latest updates on your inbox...

Opinion Poll

  • 500 ಮತ್ತು 1000 ರೂ. ನೋಟುಗಳ ನಿಷೇಧದಿಂದ ಕಪ್ಪು ಹಣಕ್ಕೆ ಕಡಿವಾಣ ಬೀಳಲಿದೆಯಾ..?

    View Results

    Loading ... Loading ...