alex Certify
ಕನ್ನಡ ದುನಿಯಾ       Mobile App
       

Kannada Duniya

ಆಸ್ಪತ್ರೆ ಕಟ್ಟಡದಿಂದ ಹಾರಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗ ಕಟ್ಟಡದ ನಾಲ್ಕನೆ ಮಹಡಿಯಿಂದ ಹಾರಿ ಅಪರಿಚಿತನೊಬ್ಬ ಮೃತಪಟ್ಟ ಘಟನೆ ಇಂದು ನಡೆದಿದೆ.

ಕಟ್ಟಡದಿಂದ ಹಾರಿದ ರಭಸಕ್ಕೆ ಮೃತನ ಕಾಲು ಮತ್ತು ಕೈ ಹಾಗೂ ಎದೆಯ ಭಾಗಕ್ಕೆ ತೀವ್ರ ಹೊಡೆತ ಬಿದ್ದಿದೆ. ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮರಣೋತ್ತರ ಪರೀಕ್ಷೆಗೆ ಶವವನ್ನು ಸಾಗಿಸಿದ್ದು, ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...