alex Certify
ಕನ್ನಡ ದುನಿಯಾ       Mobile App
       

Kannada Duniya

ತರಗತಿಯಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿ

ತಮಿಳುನಾಡಿನ ತಂಜಾವೂರಿನಲ್ಲಿ ವಿದ್ಯಾರ್ಥಿಯೊಬ್ಬ ತರಗತಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಿರುಕ್ಕಟ್ಟಪುಲ್ಲ ಗ್ರಾಮದಲ್ಲಿರುವ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. 12ನೇ ತರಗತಿಯಲ್ಲಿ ಓದುತ್ತಿದ್ದ ಸುದೀಶ್ ಬಾಬು ಎಂಬಾತ ಬೆಳಗ್ಗೆ 8 ಗಂಟೆಗೆ ಸ್ಪೆಷಲ್ ಕ್ಲಾಸ್ ಇದೆ ಅಂತಾ ಶಾಲೆಗೆ ಬಂದಿದ್ದ.

ತರಗತಿಗಳೆಲ್ಲ ಮುಗಿದ ಮೇಲೆ ಎಲ್ಲಾ ವಿದ್ಯಾರ್ಥಿಗಳೂ ಅಲ್ಲಿಂದ ತೆರಳಿದ್ದರು. ವಾಪಸ್ ಬರುವಷ್ಟರಲ್ಲಿ ಸುದೀಶ್ ಶವ ತರಗತಿಯಲ್ಲಿದ್ದ ಫ್ಯಾನ್ ಗೆ ನೇತಾಡುತ್ತಿತ್ತು. ಗಾಬರಿಬಿದ್ದ ವಿದ್ಯಾರ್ಥಿಗಳು ಕೂಡಲೇ ಶಿಕ್ಷಕರಿಗೆ ಮಾಹಿತಿ ನೀಡಿದ್ರು.

ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಪೊಲೀಸರು ತಿಳಿಸಿದ್ದಾರೆ. ಆದ್ರೆ ಕಾರಣ ಮಾತ್ರ ತಿಳಿದು ಬಂದಿಲ್ಲ. ಸುದೀಶ್ ಬ್ಲೂ ವೇಲ್ ಗೇಮ್ ಚಟ ಅಂಟಿಸಿಕೊಂಡಿದ್ದನಾ ಎಂಬ ಬಗ್ಗೆ ಕೂಡ ತನಿಖೆ ಮಾಡಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...