alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈಯ್ದ ಶಿಕ್ಷಕ

rape_660_new_022513110218_030513124812

ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ದೈಹಿಕ ಶಿಕ್ಷಣ ತರಬೇತಿ ನೀಡುತ್ತಿದ್ದ ಶಿಕ್ಷಕನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಹೇಯ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ಹೌದು. ಇಲ್ಲಿನ ಬಿಕಾನೇರ್‌ನಲ್ಲಿ ಈ ಕ್ರೂರ ಕೃತ್ಯ ನಡೆದಿದ್ದು, 17 ವರ್ಷದ ಅಪ್ರಾಪ್ತೆ ಬರ್ಮಾರ್‌ ನೋಖಾದಲ್ಲಿರುವ ಜೈನ್ ಬಿ.ಎಡ್. ಕಾಲೇಜಿನಲ್ಲಿ ಓದುತ್ತಿದ್ದಳು. ಅಷ್ಟೇ ಅಲ್ಲ, ಈಕೆ ಅತ್ಯುತ್ತಮ ವರ್ಣಚಿತ್ರಕಾರಳಾಗಿದ್ದು, ಈ ಹಿಂದೆ ಮುಖ್ಯಮಂತ್ರಿ ವಸುಂಧರಾ ರಾಜೇ ಸಿಂಧಿಯಾ ಅವರಿಂದ ಸನ್ಮಾನಿಸಲ್ಪಟ್ಟಿದ್ದಳು ಎನ್ನಲಾಗಿದೆ.

ಈ ಬಾಲಕಿಯ ಮೇಲೆ ಕಣ್ಣಿಟ್ಟಿದ್ದ ಕಾಮುಕ ಶಿಕ್ಷಕ, ವಿದ್ಯಾರ್ಥಿನಿ ತಂಗಿದ್ದ ವಸತಿ ನಿಲಯದ ವಾರ್ಡನ್ ಸಹಾಯ ಪಡೆದು ಆಕೆಯನ್ನು ಎಳೆದೊಯ್ದು ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಈ ಕುರಿತು ಈಗಾಗಲೇ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿ ಶಿಕ್ಷಕನ ಪತ್ತೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...