alex Certify
ಕನ್ನಡ ದುನಿಯಾ       Mobile App
       

Kannada Duniya

ಶಿಕ್ಷಕರ ಕಾಮದಾಟ ವೀಕ್ಷಿಸಿದ ವಿದ್ಯಾರ್ಥಿಗಳಿಗೆ ಬಿತ್ತು ಪೆಟ್ಟು

201603151238230737_Teachers-do-Obscene-gestures-in-School-claims-students_TOPVPF

ಗುರು ಸ್ಥಾನದಲ್ಲಿರುವವರು ಆದರ್ಶವಾಗಿರಬೇಕು, ಮಕ್ಕಳಿಗೆ ದಾರಿ ದೀಪವಾಗಬೇಕು ಎಂಬುದು ಎಲ್ಲರಿಗೂ ಗೊತ್ತು. ಅದು ಆ ಸ್ಥಾನಕ್ಕೆ ಇರುವ ಗೌರವವೂ ಕೂಡ. ಆದರೆ ಶಾಲೆಯೊಂದರಲ್ಲಿ ಶಿಕ್ಷಕನೋರ್ವ ಶಿಕ್ಷಕಿ ಜೊತೆ ರಾಸಲೀಲೆ ನಡೆಸಿ ಈ ದೃಶ್ಯವನ್ನು ನೋಡಿದ ವಿದ್ಯಾರ್ಥಿಗಳಿಗೆ ಮನಬಂದಂತೆ ಥಳಿಸಿದ ಆಘಾತಕಾರಿ ಘಟನೆಯೊಂದು ವರದಿಯಾಗಿದೆ.

ಹೌದು. ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ದ್ನೇನಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಶಾಲೆಯೊಂದರಲ್ಲಿ ಶಿಕ್ಷಕ ಕೊಠಡಿಯಲ್ಲಿ ಸಹ ಶಿಕ್ಷಕಿ ಜತೆ ರಂಗಿನಾಟವಾಡಿದ್ದಾನೆ. ಈ ಸಮಯದಲ್ಲಿ ಇಬ್ಬರು ವಿದ್ಯಾರ್ಥಿಗಳು ಈ ದೃಶ್ಯವನ್ನು ಕುತೂಹಲದಿಂದ ವೀಕ್ಷಿಸಿದ್ದಾರೆ. ಇದನ್ನು ಕಂಡ ಶಿಕ್ಷಕರು ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದಲ್ಲದೇ ಮನಬಂದಂತೆ ಥಳಿಸಿದ್ದಾರೆ ಎನ್ನಲಾಗಿದೆ.

ಘಟನೆಯ ಕುರಿತಾಗಿ ಮನೆಗೆ ಬಂದ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ತಿಳಿಸಿದ್ದು, ಇದರಿಂದ ಕೆರಳಿದ ಪೋಷಕರು ಶಾಲೆಯ ಬಳಿ ಪ್ರತಿಭಟನೆ ನಡೆಸಿ ಈ ಶಿಕ್ಷಕರನ್ನು ವಜಾಗೊಳಿಸುವವರೆಗೆ ಧರಣಿ ನಿಲ್ಲಿಸುವುದಿಲ್ಲ ಎಂದು ಆಗ್ರಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...