alex Certify
ಕನ್ನಡ ದುನಿಯಾ       Mobile App
       

Kannada Duniya

ಜಗಳದ ಮಧ್ಯೆ ಪೊಲೀಸ್ ಠಾಣೆಯಲ್ಲಿ ದಂಪತಿ ಮಾಡಿದ್ರು ಈ ಕೆಲಸ

ಮಹಾರಾಷ್ಟ್ರದ ನಾಂದೇಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆ ಪೊಲೀಸರನ್ನೇ ದಂಗಾಗಿಸಿದೆ. ದಂಪತಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಕುಡಿದ ದಂಪತಿಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ವೇಳೆ ಪತಿ ಸಾವನ್ನಪ್ಪಿದ್ದು, ಪತ್ನಿಗೆ ಚಿಕಿತ್ಸೆ ಮುಂದುವರೆದಿದೆ.

ನಾಂದೇಡದ ವಾಲ್ಮಿಕಿ ನಗರದ ಅಶ್ವಿನಿ ಹಾಗೂ ಶಿವಶಂಕರ್ ಪಾಟೀಲ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಅಶ್ವಿನಿ ಹಾಗೂ ಶಿವಶಂಕರ್ ಮಧ್ಯೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಮಂಗಳವಾರ ಅಶ್ವಿನಿ, ಗಂಡನ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದಾಳೆ. ಆಕೆ ಹಿಂದೆಯೇ ಶಿವಶಂಕರ್ ಅಲ್ಲಿಗೆ ಬಂದಿದ್ದಾನೆ.

ಪೊಲೀಸ್ ಠಾಣೆಯಲ್ಲೂ ಇಬ್ಬರ ಮಧ್ಯೆ ಗಲಾಟೆ ಮುಂದುವರೆದಿದೆ. ಈ ವೇಳೆ ಶಿವಶಂಕರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪತ್ನಿ ಅಶ್ವಿನಿ ಕೂಡ ಪೊಲೀಸ್ ಠಾಣೆಯಲ್ಲಿಯೇ ವಿಷ ಸೇವನೆ ಮಾಡಿದ್ದಾಳೆ. ಇದನ್ನು ನೋಡಿದ ಪೊಲೀಸರು ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಶಿವಶಂಕರ್ ಪ್ರಾಣ ಬಿಟ್ಟಿದ್ದಾನೆ. ಮಗ-ಸೊಸೆ ಸದಾ ಜಗಳವಾಡ್ತಿದ್ದರು. ಇಬ್ಬರ ಮಧ್ಯೆ ಪ್ರೀತಿಯಿರಲಿಲ್ಲವೆಂದು ಶಿವಶಂಕರ್ ತಾಯಿ ಹೇಳಿಕೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...