alex Certify
ಕನ್ನಡ ದುನಿಯಾ       Mobile App
       

Kannada Duniya

ವಿಕೋಪಕ್ಕೆ ತಿರುಗಿದ ಗುಂಪು ಘರ್ಷಣೆ: ಶೂಟೌಟ್ ನಲ್ಲಿ ಸಹೋದರರು ಸೇರಿ ಮೂವರ ಹತ್ಯೆ

ಶಹಜಾನ್ ಪುರ: ಎರಡು ಗುಂಪುಗಳ ನಡುವೆ ಆರಂಭವಾದ ವಾಗ್ವಾದ ವಿಕೋಪಕ್ಕೆ ತಿರುಗಿ ಶೂಟೌಟ್ ನಡೆದು ಇಬ್ಬರು ಸಹೋದರರು ಸೇರಿ ಮೂವರ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಲಖನೌದ ಶಹಹಾಜನ್ಪುರದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆ ಆವಾಸ್‌ ವಿಕಾಲ್‌ ಕಾಲನಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಎರಡು ಗುಂಪಿನ ನಡುವೆ ನಡೆದ ಮಾರಾಮಾರಿಯಲ್ಲಿ ಸಹೋದರರಿಬ್ಬರೂ ಸಾವನ್ನಪ್ಪಿದ್ದಾರೆ. ತಡ ರಾತ್ರಿ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ವಾಗ್ವಾದ ಆರಂಭವಾಗಿದೆ. ಇದು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ವಾಗ್ವಾದ ವಿಕೋಪಕ್ಕೆ ಹೋಗುತ್ತಿದ್ದಂತೆ ಪರಸ್ಪರ ಗುಂಡಿನ ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ ನಾಲ್ವರಿಗೆ ಗುಂಡೇಟು ತಗುಲಿದ್ದು, ಸೋದರರಾದ ಇಸ್ರಾರ್‌ ಮತ್ತು ಇಮ್ರಾನ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನು ಗಾಯಾಳು ಮುಷೀರ್‌ ಆಸ್ಪತ್ರೆ ಸಾಗಿಸುವ ವೇಳೆ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ. ರಾಹುಲ್‌ ಅಕ ಸೋನು ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...