alex Certify
ಕನ್ನಡ ದುನಿಯಾ       Mobile App
       

Kannada Duniya

ಮುಸ್ಲಿಂ ಯುವಕನ ಜೊತೆಗಿದ್ದ ಯುವತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್…!

ಕಾನೂನು ರಕ್ಷಕರೇ ಕಾನೂನು ಮುರಿದ್ರೆ ಜನಸಾಮಾನ್ಯರ ಗತಿಯೇನು? ಉತ್ತರ ಪ್ರದೇಶದ ಮೀರತ್ ನಲ್ಲಿ ಪೊಲೀಸರೇ ರಾಕ್ಷಸರಾದ ಘಟನೆ ನಡೆದಿದೆ. ಯುವತಿಯೊಬ್ಬಳು ಮುಸ್ಲಿಂ ಯುವಕನ ಜೊತೆಗಿದ್ದಳು ಎನ್ನುವ ಕಾರಣಕ್ಕೆ ಆಕೆಗೆ ಪೊಲೀಸರೇ ಹಿಂಸೆ ನೀಡಿದ್ದಾರೆ. ಮಹಿಳಾ ಕಾನ್ಸ್ಟೇಬಲ್ ಸೇರಿದಂತೆ ಮೂವರು ಪೊಲೀಸರು ಯುವತಿಗೆ ಕೆಟ್ಟ ಶಬ್ಧಗಳಿಂದ ನಿಂದಿಸಿದ್ದಲ್ಲದೆ ಕಪಾಳಮೋಕ್ಷ ಮಾಡಿದ್ದಾರೆ.

ಮೂವರು ಪೊಲೀಸರು ಯುವತಿಗೆ ಹೊಡೆಯುತ್ತಿದ್ದರೆ ಇನ್ನೊಬ್ಬ ಪೊಲೀಸ್ ವಿಡಿಯೋ ಮಾಡ್ತಿದ್ದ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಂತ್ರ ಎಚ್ಚೆತ್ತ ಪೊಲೀಸ್ ಅಧಿಕಾರಿಗಳು ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿಯನ್ನು ಕೆಲಸದಿಂದ ಸಸ್ಪೆಂಡ್ ಮಾಡಿದ್ದಾರೆ.

ಮೊದಲು ವಿಶ್ವ ಹಿಂದೂ ಪರಿಷತ್ ಸದಸ್ಯರು, ಹುಡುಗಿಯನ್ನು ಹಿಡಿದಿದ್ದಾರೆ. ಇದೊಂದು ಲವ್ ಜಿಹಾದ್ ಎಂದು ಆರೋಪ ಮಾಡಿದ್ದಾರೆ. ನಂತ್ರ ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಠಾಣೆಗೆ ಕರೆದೊಯ್ಯುವ ಸಂದರ್ಭದಲ್ಲಿ ಅವಾಚ್ಯ ಶಬ್ಧಗಳನ್ನು ಬಳಸಿ ನಿಂದಿಸಿದ್ದಲ್ಲದೆ ಹಲ್ಲೆ ನಡೆಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...