alex Certify
ಕನ್ನಡ ದುನಿಯಾ       Mobile App
       

Kannada Duniya

ವಿದೇಶಿ ಯುವತಿಗೆ ಲೈಂಗಿಕ ಕಿರುಕುಳ

rape a6 nm

ನವದೆಹಲಿ: ಭಾರತಕ್ಕೆ ಪ್ರವಾಸಕ್ಕೆ ಬಂದಿದ್ದ ವಿದೇಶಿ ಯುವತಿಯ ಮೇಲೆ, ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಅಜ್ಮೀರ್ ಸಮೀಪದ ಪುಷ್ಕರ್ ಧಾಮ್ ಗೆ, ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಈ ಕೃತ್ಯ ಎಸಗಲಾಗಿದೆ.

ಅಮೆರಿಕ, ಬ್ರಿಟನ್, ಸ್ಪೇನ್, ಟರ್ಕಿಯ ಪ್ರಜೆಗಳು ಭಾರತಕ್ಕೆ ಪ್ರವಾಸಕ್ಕೆ ಬಂದಿದ್ದರು. ಅವರಲ್ಲಿ ನಾಲ್ವರು ಬೈಕ್ ನಲ್ಲಿ ಹೋಗುವಾಗ, ದುಷ್ಕರ್ಮಿಗಳ ತಂಡ ಅವರನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದಲ್ಲದೇ, ಹಣ ದೋಚಿದೆ. ಈ ಸಂದರ್ಭದಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದ್ದು, ಜೊತೆಗಿದ್ದವರು ಓಡಿ ಹೋಗಿ, ಸಮೀಪದಲ್ಲೇ ಇದ್ದ ಜನರಿಗೆ ಮಾಹಿತಿ ನೀಡಿದ್ದಾರೆ. ಜನ ಬರುವಷ್ಟರಲ್ಲಿ, ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಯುವತಿಯ ಬಟ್ಟೆಯನ್ನು ಹರಿದು, ಅತ್ಯಾಚಾರಕ್ಕೆ ಯತ್ನಿಸಿದ್ದು, ಆಕೆ ಪ್ರತಿರೋಧ ತೋರಿದಾಗ ಹಲ್ಲೆ ಮಾಡಿದ್ದಾರೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ, ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು ವರದಿ ನೀಡಿವಂತೆ ಪೊಲೀಸರಿಗೆ ಸರ್ಕಾರ ಆದೇಶಿಸಿದ್ದು, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಾಜಸ್ಥಾನ ಸರ್ಕಾರಕ್ಕೆ ವರದಿ ನೀಡಲು ಸೂಚಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...